ಯಾದಗಿರಿ, ಮಡಿವಾಳ ಮಾಚಿದೇವ ಜಯಂತಿ ಸರಳ ರೀತಿಯಲ್ಲಿ ಆಚರಣೆ….!!!!

Listen to this article

ವರದಿ.ಮುಕ್ಕಣ್ಣ ಹುಲಿಗುಡ್ಡ

ಮಡಿವಾಳ ಮಾಚಿದೇವ ಜಯಂತಿ: ಸರಳ ಆಚರಣೆ.

ಯಾದಗಿರಿ, ಫೆ.01. ವಚನಗಳ ಸಂರಕ್ಷಣೆಯಲ್ಲಿ ಮಡಿವಾಳ ಮಾಚಿದೇವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ತ್ಯಾಗ ಸ್ಮರಣೀಯ ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್. ಅವರು ಅಭಿಪ್ರಾಯಪಟ್ಟರು.

ಅವರು ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಫೆ.01ರ ಸೋಮವಾರ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಡಿವಾಳ ಮಾಚಿದೇವರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

ಸಮಾನತೆ ತರವುದು, ಜಾತಿಯತೆಯ ನಿರ್ಮೂಲನೆ, ಸ್ತ್ರೀ ಸ್ವಾತಂತ್ರ‍್ಯಕ್ಕೆ ಮನ್ನಣೆ, ಹನ್ನೆರಡನೆಯ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯ ಮೂಲ ಉದ್ದೇಶವಾಗಿತ್ತು. ಅಂದಿನ ಸಾಮಾಜಿಕ ಕ್ರಾಂತಿಯಲ್ಲಿ ಮಡಿವಾಳ ಮಾಚಿದೇವರು ವಚನ ಗ್ರಂಥಗಳನ್ನು ಸಂರಕ್ಷಿಸುವ ಮೂಲಕ ಶರಣರ ಗೌರವಕ್ಕೆ ಪಾತ್ರರಾಗಿದ್ದರು ಎಂದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ಹಾಗೂ ಮಡಿವಾಳ ಸಮಾಜದ ಜಿಲ್ಲಾಧ್ಯಕ್ಷ ಮಡಿವಾಳಪ್ಪ ಬಿಜಸಪುರು, ಸಮಾಜದ ಮುಖಂಡರಾದ ನಾಗಪ್ಪ ಮೊಗ್ದಂಪುರು, ಮಹಾದೇವಪ್ಪ ಯಲಸತ್ತಿ, ಶ್ರೀಶೈಲ ಗುತ್ತೇಗೆದಾರ, ಸಾಬು ಮಡಿವಾಳ, ಮರೆಪ್ಪ, ಚನ್ನಪ್ಪ, ದೇವಿಂದ್ರಪ್ಪ ಸಲಿಕೇರಿ, ನಾಗಪ್ಪ ದುರಗಪ್ಪ, ಮಲ್ಲು ಸೇರಿದಂತೆ ಇತರೆ ಗಣ್ಯರು, ಮಡಿವಾಳ ಮಾಚಿದೇವರ ಅನುಯಾಯಿಗಳು, ಅಭಿಮಾನಿಗಳು ಹಾಜರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend