ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘದ ಬಿ ಎನ್ ಕೆ ಹೈಸ್ಕೂಲ್ ನಲ್ಲಿ ಇಂದು ಪರೀಕ್ಷೆ ನಡೆಸಲಾಯಿತು…!!!

Listen to this article

ರಾಯಬಾಗ; ತಾಲ್ಲೂಕಿನ ಮುಗಳಖೋಡ ಪಟ್ಟಣದ ಶ್ರೀ ಚನ್ನಬಸವೇಶ್ವರ ವಿದ್ಯಾವರ್ಧಕ ಸಂಘದ ಬಿ ಎನ್ ಕೆ ಹೈಸ್ಕೂಲ್ ನಲ್ಲಿ ಸೋಮವಾರ ಬೆಳಿಗ್ಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹುಮ್ಮಸ್ಸಿನಿಂದ ಪಾಲ್ಗೊಂಡರು. ಬಿ ಎನ್ ಕೆ ಹೈಸ್ಕೂಲ್ ಸೇರಿದಂತೆ ಒಟ್ಟು 7ಹೈಸ್ಕೂಲ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ಇಲ್ಲಿ ಪರೀಕ್ಷೆಯನ್ನು ಬರೆದಿದ್ದಾರೆ. ಸಂಸ್ಥೆಯ ಆಡಳಿತ ಮಂಡಳಿಯು ಕೋವಿಂದ್ ನಿಯಮದನುಸಾರ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅಚ್ಚುಕಟ್ಟಾದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಿದ್ದರು. ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಕೋವಿಂದ್ ನಿಯಮವನ್ನು ಅಚ್ಚುಕಟ್ಟಾಗಿ ಪಾಲನೆ ಮಾಡುವಂತೆ ಗೋಚರಿಸುತ್ತಿತ್ತು. ನಲವತ್ತ್ 4ಬ್ಲಾಕ್ ಗಳಲ್ಲಿ ಒಟ್ಟು ಐನೂರ ಇಪ್ಪತ್ತ್ 6ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಸ್ಥಳೀಯ ಪುರಸಭೆ ವತಿಯಿಂದ ಪ್ರತಿಯೊಂದು ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸರ್ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು, ಸ್ಕೌಟ್&ಗೈಡ್ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ತಮ್ಮ ತಮ್ಮ ಕೆಲಸ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡುತ್ತಿದ್ದರು. ಕೋವಿ ಡ್ ನ ಜನತಾ ಕರ್ಫ್ಯೂ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ತರಗತಿಗಳನ್ನು ನಡೆಸಲು ಸಾಧ್ಯವಾಗದೆ ಇರುವುದರಿಂದ , ಆನ್ ಲೈನ್ ಮೂಲಕ ತರಗತಿಯಲ್ಲಿ ಭಾಗವಹಿಸಿ ಅಧ್ಯಯನ ಮಾಡಿರುವ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎಂಬ ಎದುರಿಸುತ್ತೇವೆ ಎಂಬ ದೃಢವಾದ ಸಂಕಲ್ಪ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಗೋಚರಿಸುತ್ತಿತ್ತು. ನೆಗಡಿ, ಕೆಮ್ಮು, ಸೀತ ಇರುವಂಥ ವಿಶೇಷ ಕೊಠಡಿಗಳಲ್ಲಿ ಯಾವುದೇ ವಿದ್ಯಾರ್ಥಿಗಳು ಇಲ್ಲದಿರುವುದು ಗೋಚರಿಸಿತ್ತು. ಪೂರ್ವ ತಯಾರಿಯಲ್ಲಿ ಕಾರ್ಯೋನ್ಮುಖರಾದ ಸಂಸ್ಥೆಯ ಆಡಳಿತ ಮಂಡಳಿಯು ಕೋವಿಡ ನಿಯಮ ಉಲ್ಲಂಘನೆಯಾಗದಂತೆ ಪರೀಕ್ಷೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಆತ್ಮಸ್ಥೈರ್ಯದಿಂದ ಪರೀಕ್ಷೆಯನ್ನು ಎದುರಿಸಿ ಎಂದು ಜಿಪಂ ಮಾಜಿ ಸದಸ್ಯ ಡಾಕ್ಟರ್ ಸಿ ಬಿ ಕುಲಿಗೋಡ ಶುಭ ಹಾರೈಸಿದರು..

ವರದಿ. ಮಹಾಲಿಂಗ ಗಗ್ಗರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend