ರೈತರು ದೆಹಲಿ ಹೋರಾಟ: ಬೆಂಬಲಿಸಿ ತಾಲೂಕು ರೈತ ಸಂಘ ಪ್ರತಿಭಟನೆ -ತಹಶೀಲ್ದಾರ್‌ಗೆ ಮನವಿ.!!

Listen to this article

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ತಾಲೂಕು ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಪಟ್ಟಣದ ತಾಲೂಕು ಕಚೇರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಹಂತಕ್ಕೆ ತಲುಪಿದೆ. ರೈತರ ಪ್ರತಿಭಟನೆಯಲ್ಲಿ ಹತ್ತಿಕ್ಕಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಖಾಸಗಿ ವ್ಯಕ್ತಿಗಳನ್ನು ಬಳಸಿಕೊಂಡು ದೇಶದ ಜನರನ್ನು ದಿಕ್ಕು ತಪ್ಪಿಸುವ ಕುತಂತ್ರ ನಡೆಸಿದೆ. ಇದು ಪ್ರಜಾಪ್ರಭುತ್ವದ ಕಗ್ಗೂಲೆ ಎಂದು ಆರೋಪಿಸಿದರು. ಜ 26 ರಂದು ದೆಹಲಿಯಲ್ಲಿ ನಡೆಯುತ್ತಿದ್ದ ಟ್ರಾಕ್ಟರ್ ಪೆರೇಡ್ ವೇಳೆ ಕಿಡಿಗೇಡಿಗಳನ್ನು ಬಿಟ್ಟು ರೈತರ ಪ್ರತಿಭಟನೆಯನ್ನೇ ದಾರಿ ತಪ್ಪಿಸಿ ವಿಕೋಪಕ್ಕೆ ಹೋಗುವಂತೆ ಮಾಡಿದ್ದಾರೆ. ಕೆಂಪು ಕೋಟೆಯ ಮೇಲೆ ಬೇರೆಧ್ವಜ ಹಾರಿಸಿರುವ ಕುರಿತು ಸೂಕ್ತ ತನಿಖೆ ನಡೆಸಬೇಕು. ಪ್ರತಿಭಟನೆಯಲ್ಲಿ ಅಹಿತಕರ ಘಟನೆಗಳು ಜರುಗುವಂತೆ ಮಾಡಿದ ಕಿಡಿಗೇಡಿಗಳ ಕುರಿತು ತನಿಖೆ ನಡೆಸಬೇಕು. ಜತೆಗೆ ಕೇಂದ್ರ ಸರ್ಕಾರ ಕೂಡಲೇ ಮೊಂಡುತನ ಪ್ರದರ್ಶಿಸದೆ ಕೃಷಿ ಕಾಯ್ದೆಗಳ ತಿದ್ದುಪಡಿ ಮಾಡಿರುವುದನ್ನು ರದ್ದುಗೊಳಿಸಬೇಕು. ರೈತರಿಗೆ ಹಾಗೂ ಕಾರ್ಮಿಕರಿಗೆ ಹೊಸ ಸಾಲನೀಡಿ ನೆರವಾಗಬೇಕು ಹಾಗೂ ರಾಜ್ಯದ ಕಾರ್ಮಿಕರಿಗೆ ಇರುವ ಕಾನೂನುಗಳನ್ನು ಸರಳಗೊಳಿಸುವ ಜತೆಗೆ ಇನ್ನಷ್ಟು ಸರ್ಕಾರದ ಸೌಲಭ್ಯಗಳನ್ನು ಕಲಿಸಬೇಕೆಂದು ಆಗ್ರಹಿಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ರೈತ ಸಂಘದ ರಾಜ್ಯ ಮುಖಂಡ ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಬೆಳಗಲ್ ಈಶ್ವರಯ್ಯಸ್ವಾಮಿ, ರಾಜಣ್ಣ ಕಾರ್ಯದರ್ಶಿ ಜಾಫರ್‌ಷರೀಫ್, ಕೋನಸಾಗರ ಮಂಜಣ್ಣ, ಮಲ್ಲಹಳ್ಳಿ ರವಿ ಕುಮಾರ್ ಮತ್ತಿತರರಿದ್ದರು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend