ವಿಜಯನಗರ ಒಟ್ಟು 919 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಕೊಠಡಿಗಳಿಗೂ ಸಿ.ಸಿ.ಟಿ.ವಿ ಕ್ಯಾಮೆರಾ ಕಣ್ ಗಾವಲು.,.!!!

Listen to this article

ಎಸ್ಸೆಸ್ಸೆಲ್ಸಿ ಪರೀಕ್ಷೆಗ ವಿಜಯನಗರ ಜಿಲ್ಲೆ ಸಜ್ಜಾಗಿದ್ದು, 65 ಪರೀಕ್ಷಾ ಕೇಂದ್ರಗಳಲ್ಲಿ ಇದೇ 25ರಿಂದ ಏಪ್ರಿಲ್‌ 6ರವರೆಗೆ ಪರೀಕ್ಷೆ ನಡೆಯಲಿದೆ.

ಒಟ್ಟು 919 ಕೊಠಡಿಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಕೊಠಡಿಗಳಿಗೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸಲಾಗಿದೆ

ಕಾರಿಡಾರ್‌ಗಳಲ್ಲಿ ಸಹ ಕ್ಯಾಮೆರಾ ಅಳವಡಿಸಲಾಗಿದ್ದು, ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ವೆಬ್‌ಕಾಸ್ಟಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರಗಳ ಪೈಕಿ ಸರ್ಕಾರಿ ಪ್ರೌಢಶಾಲೆಗಳಲ್ಲಿ 35, ಅನುದಾನಿತ ಪ್ರೌಢಶಾಲೆಗಳಲ್ಲಿ 11 ಹಾಗೂ ಅನುದಾನರಹಿತ ಪ್ರೌಢಶಾಲೆಗಳಲ್ಲಿ 19 ಕೇಂದ್ರಗಳನ್ನು ತೆರೆಯಲಾಗಿದೆ.

ಕೊಟ್ಟೂರಿನ ಗುರುದೇವ ಪ್ರೌಢಶಾಲೆ ಮತ್ತು ಚಿಕ್ಕಜೋಗಿಹಳ್ಳಿಯ ಸರ್ಕಾರಿ ಪ್ರೌಶಾಲೆ ಪರೀಕ್ಷಾ ಕೇಂದ್ರಗಳನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿದೆ.

21,768 ವಿದ್ಯಾರ್ಥಿಗಳಿಂದ ನೋಂದಣಿ: ಈ ಬಾರಿ ಪರೀಕ್ಷೆಗೆ ಜಿಲ್ಲೆಯಲ್ಲಿ 21,768 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 65 ಮಂದಿ ಮುಖ್ಯ ಅಧೀಕ್ಷಕರನ್ನು, 22 ಮಂದಿ ಉಪಮುಖ್ಯ ಅಧೀಕ್ಷಕರನ್ನು ಹಾಗೂ 65 ಮಂದಿ ಪ್ರಶ್ನೆಪತ್ರಿಕೆ ಪಾಲಕರನ್ನು ನಿಯೋಜಿಸಲಾಗಿದೆ. ಒಟ್ಟು 22 ಮಂದಿ ಮಾರ್ಗಾಧಿಕಾರಿಗಳಿದ್ದು, ಹೊಸಪೇಟೆ ತಾಲ್ಲೂಕಿನಲ್ಲಿ 6, ಹಗರಿಬೊಮ್ಮನಹಳ್ಳಿಯಲ್ಲಿ 4, ಹೂವಿನಹಡಗಲಿಯಲ್ಲಿ 3, ಹರಪನಹಳ್ಳಿಯಲ್ಲಿ 4 ಹಾಗೂ ಕೂಡ್ಲಿಯಲ್ಲಿ 5 ಮಂದಿ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ.

ಕೊಠಡಿ ಮೇಲ್ವಿಚಾರಕರಾಗಿ ಪ್ರೌಢಶಾಲಾ ಶಿಕ್ಷಕರನ್ನು, ಕಡಿಮೆ ಬಿದ್ದರೆ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿಕೊಳ್ಳಲು ಸೂಚಿಸಲಾಗಿದೆ. ಭಾಷಾ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆಗಳಂದು ಈ ವಿಷಯ ಬೋಧಿಸುವ ಶಿಕ್ಷಕರ ಹೊರತುಪಡಿಸಿ ಉಳಿದ ಶಿಕ್ಷಕರನ್ನು ಕೊಠಡಿ ಮೇಲ್ವಿಚಾರಕರಾಗಿ ನಿಯೋಜಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ….

ವರದಿ. ಗಣೇಶ್, ಬಿ, ಹೊಸಪೇಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend