ಶಹಾಪುರ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ”ರಾಗಪ್ರಿಯಾ,ಆರ್ ಭೇಟಿ ನಕಲಿ ವೈದ್ಯರ ವಿರುದ್ಧ ಎಫ್‌ಐಆರ್ ದಾಖಲಿಸಲು ಕಟ್ಟುನಿಟ್ಟಿನ ಸೂಚನೆ…!!!

Listen to this article

ಯಾದಗಿರಿ ಮೇ 21: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದ್ದು ಅಂತವರ ವಿರುದ್ಧ ಎಫ್.ಐ.ಆರ್ ದಾಖಲಿಸಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಸೂಚಿಸಿದರು.
ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಶಹಾಪುರ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡುತ್ತಿದ್ದ ಅವರು, ನಕಲಿ ವೈದ್ಯರು ನೀಡುವ ಔಷಧಿಯಿಂದ ಕೋವಿಡ್ ಸೋಂಕಿತರ ಆರೋಗ್ಯದಲ್ಲಿ ಭಾರೀ ಸಮಸ್ಯೆಯಾಗಲಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಮಾತ್ರೆ, ಔಷಧಿಗಳನ್ನು ವೈದ್ಯರು ರೋಗಿಗಳಿಗೆ ವಿತರಿಸಬೇಕು. ಮಾತ್ರೆ, ಔಷಧಿಗಳೂ ದಾಸ್ತಾನಿದ್ದರೂ, ಹೊರಗಿನ ಮೆಡಿಕಲ್ ಸ್ಟೋರ್‌ಗಳಿಗೆ ಬರೆದುಕೊಟ್ಟರೆ, ಅಂತಹ ವೈದ್ಯರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.
ಕೋವಿಡ್‌ನ ತೀವ್ರತರನಾದ ರೋಗ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗುವ ಸೋಂಕಿತರಿಗೆ ಯಾವುದೇ ತೊಂದರೆಯಾಗದAತೆ ವೈದ್ಯರು, ನರ್ಸ್ ಗಳು ಹಾಗೂ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸಬೇಕು. ಗಂಭೀರ ಸಮಸ್ಯೆಯುಳ್ಳ ಸೋಂಕಿತರಿಗೆ ತಕ್ಷಣ ಚಿಕಿತ್ಸೆಯನ್ನು ಪ್ರಾರಂಭಿಸಬೇಕು ಎಂದು ಅವರು ಸಲಹೆ ನೀಡಿದರು.
ಜವಾಬ್ದಾರಿ ತೆಗೆದುಕೊಂಡು ನಮಗೆ ಯಾವುದೇ ದೂರು ಬಾರದ ರೀತಿಯಲ್ಲಿ ಕೆಲಸಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.


ಶುದ್ಧ ಕುಡಿಯುವ ನೀರು ಸೇರಿದಂತೆ ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಅವರು ತಿಳಿಸಿದರು.
ಶಹಾಪುರ ತಾಲೂಕಿನಲ್ಲಿ ಸೂಚಿಸಿದ ಕ್ವಾರಂಟೈನ್ ಕೇಂದ್ರಗಳಿಗೆ ಸೋಂಕಿತರನ್ನು ಕರೆತರಲು ಮನವೊಲಿಸಬೇಕು ಎಂದು ತಾಲೂಕು ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದ ಅವರು, ಕ್ವಾರಂಟೈನ್ ಕೇಂದ್ರಗಳಿಗೆ ಅಗತ್ಯವಿದ್ದರೆ ಪೋಲೀಸ್ , ಗೃಹ ರಕ್ಷಕ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಬೇಕು. ಏನೇ ಸಮಸ್ಯೆಗಳಿದ್ದರೆ ತಕ್ಷಣ ಗಮನಕ್ಕೆ ತರಬೇಕು ಎಂದು ಅವರು ತಿಳಿಸಿದರು.
ಶಹಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಸಿ.ಸಿ ಟಿವಿ ಅಳವಡಿಸಿದ್ದು, ಹೆಚ್ಚಿನ ಸಿ.ಸಿ ಕ್ಯಾಮರಗಳು ಅವಶ್ಯಕತೆ ಇದೆಯೆಂದು ವೈದ್ಯಾಧಿಕಾರಿಗಳು ತಿಳಿಸಿದಾಗ, ತಕ್ಷಣ ಸಮಸ್ಯೆ ಬಗೆಹರಿಸುವಂತೆ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಶಹಾಪುರ ವೈದ್ಯಾಧಿಕಾರಿ ಡಾ.ರಮೇಶ್ ಗುತ್ತೇದಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಹಾಗೂ ಶಹಾಪುರ ತಾಲೂಕ ಆಸ್ಪತ್ರೆಯ ನೋಡಲ್ ಅಧಿಕಾರಿ ಪ್ರಭಾಕರ್ ಕವಿತಾಳ, ಯಾದಗಿರಿ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಗುರುನಾಥ, ಯಾದಗಿರಿ ಜಿಲ್ಲಾ ನಿರ್ಮಿತ ಕೇಂದ್ರ ಯೋಜನಾ ನಿರ್ದೇಶಕ ಕಿರಣಕುಮಾರ ಹೂಗಾರ, ನಿರ್ಮಿತಿ ಕೇಂದ್ರದ ಯೋಜನಾ ಅಭಿಯಂತರ ರಾಮನಗೌಡ ಪಾಟೀಲ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಲಕ್ಷ್ಮೀಕಾಂತ, ಶಹಾಪುರ ತಹಶೀಲ್ದಾರ ಜಗನ್ನಾಥರೆಡ್ಡಿ, ವಡಗೇರಾ ತಹಶೀಲ್ದಾರ ಸುರೇಶ ಅಂಕಲಗಿ, ಶಹಾಪುರ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗನ್ನಾಥ ಮೂರ್ತಿ, ಶಹಾಪುರ ಪೌರಾಯುಕ್ತ ರಮೇಶ ಪಟ್ಟೇದಾರ್ ಇನ್ನಿತರರು ಇದ್ದರು.


ಆಸ್ಪತ್ರೆಗೆ ಭೇಟಿ,ಪರಿಶೀಲನೆ: ಸಭೆ ನಂತರ ಶಹಾಪುರ ತಾಲ್ಲೂಕು ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಕೋವಿಡ್ ಸೋಂಕಿತರಿಗೆ ಆಂಬ್ಯುಲೆನ್ಸ್, ಬೆಡ್ ಲಭ್ಯತೆ, ಆಕ್ಸಿಜನ್, ಔಷಧದ ಪೂರೈಕೆ ಮುಂತಾದವುಗಳ ಬಗ್ಗೆ ಅವರು ವೈದ್ಯರಿಂದ ಮಾಹಿತಿ ಸಂಗ್ರಹಿಸಿದರು. ಕೋವಿಡ್ ಸೋಂಕಿತರಿಗೆ ಅಗತ್ಯ ಔಷಧಿ ದಾಸ್ತಾನು ಮಾಡಿ ಇಟ್ಟುಕೊಳ್ಳಬೇಕು. ಆಕ್ಸಿಜನ್ ಕೊರತೆ ಉಂಟಾಗದoತೆ ನಿಗಾವಹಿಸಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.
ಸಿಬ್ಬಂದಿಗಳ ಹಾಜರಾತಿಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವವರು ಗೈರಾಗದಂತೆ ನೋಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿಗೆ ತಿಳಿಸಿದರು.

ವರದಿ. ಮುಕ್ಕಣ್ಣ ಹುಲಿಗುಡ್ಡ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend