ಸಿಂಧನೂರು : ಕಾಂಗ್ರೆಸ್ ಸದಸ್ಯತ್ವ ಅಭಿಮಾನಕ್ಕೆ ಸ್ವಯಂ ಪ್ರೇರಿತರಾಗಿ ಬೆಂಬಲ- ಬಸನಗೌಡ ಬಾದರ್ಲಿ…!!!

Listen to this article

ಸಿಂಧನೂರು : ಕಾಂಗ್ರೆಸ್ ಸದಸ್ಯತ್ವ ಅಭಿಮಾನಕ್ಕೆ ಸ್ವಯಂ ಪ್ರೇರಿತರಾಗಿ ಬೆಂಬಲ- ಬಸನಗೌಡ ಬಾದರ್ಲಿ.

ರಾಜ್ಯದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜನರು ಬೇಸತ್ತು ಸ್ವಯಂಪ್ರೇರಿರತರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ ಎಂದು ಮಾಜಿ ಯುವ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಬಸನಗೌಡ ಬಾದರ್ಲಿ ತಿಳಿಸಿದರು.

ಬಾದರ್ಲಿ ಗ್ರಾಮದಲ್ಲಿ ತಾಲೂಕು ಕಾಂಗ್ರೆಸ್ ನಿಂದ ಸದಸ್ಯತ್ವ ಅಭಿಯಾನ ಕಾರ್ಯಕ್ರಮವನ್ನು ರೈತ ಗೀತೆಯೊಂದಿಗೆ ಚಾಲನೆ ನೀಡಿ ಮಾತನಾಡಿದರು.

ಕೆಪಿಸಿಸಿ ವತಿಯಿಂದ ರಾಜ್ಯಾದ್ಯಂತ ಏಕ ಕಾಲದಲ್ಲಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು ಸಿಂಧನೂರು ವಿಧಾನಸಭಾ ಕ್ಷೇತ್ರದಲ್ಲಿ ತಾಲೂಕು ಕಾಂಗ್ರೆಸ್ ನಿಂದ 15 ಕಡೆ ಸದಸ್ಯತ್ವ ಅಭಿಯಾನ ನಡೆಸುತ್ತಿದೆ. ಉಳಿದಂತೆ ತಾಲೂಕಿನ ಎಲ್ಲಾ ಬ್ಲಾಕ್ ಗಳ ಲ್ಲಿಯೂ ಪದಾಧಿಕಾರಿಗಳ ತಂಡಗಳಲ್ಲಿ ಸದಸ್ಯತ್ವ ನಡೆಸಲಿದೆ ಎಂದರು.

ಕಾಂಗ್ರೆಸ್ ಪಕ್ಷ ಸದೃಧವಾಗಲು ಸಂಘಟನೆ ಮಾಡುತ್ತಿದ್ದು, ಹಳ್ಳಿಯಿಂದ ದಿಲ್ಲಿಯವರೆಗೆ ರೈತರ ಮಕ್ಕಳು, ರಾಜಕೀಯ ಹಿನ್ನೆಲೆ ಇಲ್ಲದವರು ರಾಜಕೀಯಕ್ಕೆ ಬರಬೇಕು ಎನ್ನುವ ಉದ್ದೇಶದಿಂದ ಈ ಅಭಿಮಾನಕ್ಕೆ ಚಾಲನೆ ನೀಡಲಾಗಿದೆ. ಇಂದಿನ ಸದಸ್ಯತ್ವ ಅಭಿಯಾನಕ್ಕೆ ಸಿಕ್ಕ ಬೆಂಬಲವೇ ಸಾಕ್ಷಿ ಎಂದರು.ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಪ್ಪು ಹಣ ವಾಪಸ್ ತಂದು ನಿಮ್ಮ ಖಾತೆಗಳಿಗೆ ಹದಿನೈದು ಲಕ್ಷ ರೂಪಾಯಿ ಹಣ ಹಾಕುತ್ತೇವೆ, ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ, ವರ್ಷಕ್ಕೆ ಎರಡು ಕೋಟಿ ಯುವಕರಿಗೆ ಉದ್ಯೋಗ ಕೊಡುತ್ತೇವೆ ಎಂದು ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರ ಪಡೆದು ಜನರಿಗೆ ಮೋಸ ಮಾಡುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್ ಪಕ್ಷ ದಲಿತರ,ಬಡವರ,ಯುವಕರ, ಮಹಿಳೆಯರ,ಕೂಲಿಕಾರರ, ರೈತರ ಪರವಾದ,ಕೊಟ್ಟ ಮಾತಿನಂತೆ ನಡೆಯುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಆದರಿಂದ ಈ ಸದಸ್ಯತ್ವ ಅಭಿಯಾನದಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಿ ಪ್ರತಿ ಗ್ರಾಮದಲ್ಲಿ ಮೂರು ತಿಂಗಳು ವರೆಗೆ ಸದಸ್ಯತ್ವ ಅಭಿಯಾನ ಮುಂದುವರೆಯಲಿದ್ದು ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷವನ್ನ ಕಾರ್ಯಕರ್ತರೊಂದಿಗೆ ಸೇರಿ ಕಟ್ಟುತ್ತೇವೆ ಸದಸ್ಯತ್ವ ಅಭಿಯಾನ ಒಂದು ಇತಿಹಾಸ ಸೃಷ್ಟಿಸಲಿದೆ.ರಾಜ್ಯದಲ್ಲಿ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದು ಇಂದು ಕಾಂಗ್ರೆಸ್ ಸೇರುತ್ತಿದ್ದಾರೆ ನಾವು ಯಾರಿಗೂ ಸಹ ಒತ್ತಡ ಹಾಕುತ್ತಿಲ್ಲ ಜನರೇ ನಮ್ಮ ಕಾಂಗ್ರೆಸ್ ಪಕ್ಷದತ್ತ ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ಮಾತನಾಡಿದರು.

ನಂತರ ಎಚ್.ಎಂ.ಬಡಿಗೇರ ಮಾತನಾಡಿ ತಾಲೂಕಿನಲ್ಲಿ ಅಕಾಲಿಕ ಮಳೆಯಿಂದ ರೈತರು ಕಂಗಾಲಾಗಿದ್ದಾರೆ.ಕಾಟಚಾರಕ್ಕೆ ಬೆಳೆ ಸಮೀಕ್ಷೆ ಮಾಡಿ ಇನ್ನೂ ಬೆಳೆ ಪರಿಹಾರ ಸಿಕ್ಕಿಲ್ಲ,ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಸಿಗದೆ ರೈತರು ಸಾವಿಗಿಡಾಗಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ ಬಡವರ,ದಲಿತರ, ರೈತರ ಕಾರ್ಯಕ್ರಮಗಳನ್ನು ಬಿಜೆಪಿ ಸರಕಾರ ರದ್ದು ಮಾಡಿ, ಸಮಗ್ರ ಸಂಪತ್ತನ್ನು ಲೂಟಿ ಮಾಡುವವರ, ಪರಿಸರ, ಭೂಮಿ, ನದಿಗಳನ್ನು ಕಲುಷಿತಗೊಳಿಸುವವರ, ಬಂಡವಾಳಶಾಹಿಗಳ, ಕಾರ್ಪೋರೆಟ್ ಕಂಪನಿಗಳ, ಪರವಾದ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಹುಟ್ಟುಹಾಕಿ ಬಡವರನ್ನು ಶಿಕ್ಷಣದಿಂದ ವಂಚಿತರನ್ನಾಗಿಸಿದೆ. ರೈತರಿಗೆ, ಬಡವರಿಗೆ, ಕೂಲಿಕಾರರಿಗೆ ಕಷ್ಟ ಬಂದರೆ ಅದು ಹಣೆಬರಹ, ಪಾಪಪೂಣ್ಯ ಕಾರಣವಲ್ಲ, ನಮ್ಮನ್ನು ಆಳುವ ಸರ್ಕಾರಗಳು ಕಾರಣ, ಆದರಿಂದ ಉತ್ತಮ ನಾಯಕರನ್ನು ಆರಿಸಿ ಕಳುಹಿಸಬೇಕು. ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯನವರು ಸೇರಿದಂತೆ ಪಕ್ಷದ ಮುಖಂಡರ ನೇತೃತ್ವದಲ್ಲಿ ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ಮುಂದಿನ 2023ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ವೆಂಕಟೇಶ ರಾಗಲಪರ್ವಿ, ಪಂಪಾಪತಿ ಅಲಬನೂರು, ಖಾಜಾಹುಸೇನ ರವಡಕುಂದಾ, ಯಂಕನಗೌಡ, ತಾಲೂಕು ಪಂಚಾಯತ್ ಸದಸ್ಯರು, ಗ್ರಾ.ಪಂ. ಸದಸ್ಯರು,ಕಾರ್ಯಕರ್ತರು ಭಾಗವಹಿಸಿದ್ದರು…

ವರದಿ.ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend