ಮಹಿಳೆಯ ಹೋರಾಟ ಇಂದು-ನಿನ್ನೆಯದಲ್ಲ -ಡಾ. ನಾಗವೇಣಿ…!!!

Listen to this article

ಮಹಿಳೆಯ ಹೋರಾಟ ಇಂದು-ನಿನ್ನೆಯದಲ್ಲ -ಡಾ. ನಾಗವೇಣಿ.

ಸಿಂಧನೂರು : ಹೆಣ್ಮಕ್ಕಳೇ ಸ್ಟಾಂಗ್ ಗುರು ಎಂದು ಹೇಳುವ ನಾವೂ ಮಹಿಳೆಯ ಹೋರಾಟ ಇಂದು ನಿನ್ನೆಯದಲ್ಲ. ಸದಾ ತನ್ನ ಹಕ್ಕಿಗಾಗಿ ಮಹಿಳೆ ಕಾದಾಡಿದ್ದಾಳೆ. ಪ್ರಪಂಚ ಇಷ್ಟು ಮುಂದುವರೆದಿದ್ದರೂ ಮಹಿಳೆಗೆ ಸಿಗಬೇಕಾದ ಸ್ಥಾನ ಇನ್ನೂ ಸಂಪೂರ್ಣವಾಗಿ ಸಿಕ್ಕಿಲ್ಲ. ಪ್ರತಿ ವರ್ಷ ಮಹಿಳಾ ದಿನಾಚರಣೆ ಆಚರಿಸಲಾಗುತ್ತದೆ.

ಮಹಿಳೆ ಸಮಾಜದ ಶಕ್ತಿ ಕುಟುಂಬದ ಕಣ್ಣು. ಸಮಾಜ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಮಹಿಳೆ ಪ್ರಮುಖ ಪಾತ್ರ ವಹಿಸಿದ್ದಾಳೆ. ಹಿಂದಿನ ಕಾಲದಲ್ಲಿ ಬೆರಳೆಣಿಕೆಯಷ್ಟು ಮಹಿಳೆಯರು ಮಾತ್ರ ಮನೆಯಿಂದ ಹೊರಗೆ ಬಂದು ದುಡಿಯುತ್ತಿದ್ದರು. ಆದ್ರೀಗ ಕಾಲ ಬದಲಾಗಿದೆ. ಮಹಿಳೆ ತಾನು ಎಲ್ಲವನ್ನೂ ನಿಭಾಯಿಸಬಲ್ಲೆ ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ಗಡಿ ಕಾಯುವುದ್ರಿಂದ ಹಿಡಿದು ಕುಟುಂಬದ ಪ್ರತಿಯೊಂದು ಕೆಲಸವನ್ನು ಅಚ್ಚುಕಟ್ಟಾಗಿ ನಿರ್ವಹಿಸಬಲ್ಲ ಶಕ್ತಿ, ತಾಳ್ಮೆ, ಉತ್ಸಾಹ, ಧೈರ್ಯ ಮಹಿಳೆಗಿದೆ. ಪುರುಷರ ಸಮಾನವಾಗಿ ನಿಂತಿರುವ ಮಹಿಳೆಯರು ಅನೇಕ ಉನ್ನತ ಹುದ್ದೆಗಳನ್ನು ಸಂಭಾಳಿಸುತ್ತಿದ್ದಾರೆ.ಇಷ್ಟರ ಮಧ್ಯೆಯೂ ತುಳಿತಕ್ಕೆ, ಕೌಟುಂಬಿಕ ದೌರ್ಜನ್ಯಕ್ಕೆ ಬಲಿಯಾಗ್ತಿರುವ ಅನೇಕ ಮಹಿಳೆಯರು ನಮ್ಮಲ್ಲಿದ್ದಾರೆ. ಅವರಿಗೆ ಧೈರ್ಯ ನೀಡಿ, ಮಹಿಳೆಗೆ ತನ್ನ ಹಕ್ಕಿನ ಪರಿಚಯ ಮಾಡಿಸಿ, ಆಕೆಯನ್ನು ಸ್ವಾವಲಂಬಿ ಮಾಡುವ ಉದ್ದೇಶದಿಂದ, ಆಕೆಯ ಜೀವನವನ್ನು ಸುಂದರಗೊಳಿಸುವ ಉದ್ದೇಶದಿಂದ ಪ್ರತಿ ವರ್ಷ ವಿಶ್ವದ ಎಲ್ಲಾ ದೇಶಗಳಲ್ಲಿ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನಾಗಿ ಆಚರಿಸಲಾಗುತ್ತದೆ.

ಸಾವಿತ್ರಿ ಬಾಪೂಲೆ ಮೊಟ್ಟ ಮೊದಲ ಮಹಿಳಾ ಶಿಕ್ಷಕಿ, ಭಾರತೀಯ ರಾಜಕಾರಣದಲ್ಲಿ ದೊಡ್ಡ ಹೆಸರು ಮಾಡಿರುವ ಮಹಿಳೆ ಇಂದಿರಾಗಾಂಧಿ, ಭಾರತದ ಪ್ರಥಮ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಯ ಪ್ರತಿಭಾ ಪಾಟೀಲ್ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿ ಅತ್ಯಂತ ಸಣ್ಣ ವಯಸ್ಸಿನಲ್ಲಿ ಅಂತರಿಕ್ಷದಲ್ಲೇ ಭಸ್ಮವಾದ ಮಹಿಳೆ ಕಲ್ಪನಾ ಚಾವ್ಲ , ರಾಣಿ ಚೆನ್ನಮ್ಮ, ಕೆಳದಿ ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ,ಓನಕೆ ಓಬವ್ವ , ಮದರ್ ತೇರಿಸಾ, ಕಿರಣ್ ಬೇಡಿ ಭಾರತದ ಮೊಟ್ಟ ಮೊದಲ ಮಹಿಳಾ IPS ಅಧಿಕಾರಿ ,ಪಿವಿ ಸಿಂಧು , ಮೇರಿಕಾಂ ಅಪ್ರತಿಮ ಬಾಕ್ಸರ್ ಒಬ್ಬ ತಾಯಿಯಾಗಿ ಐದು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ ನಲ್ಲಿ ಪದಕ ಗೆದ್ದು ಮುಡಿಗೇರಿಸಿಕೊಂಡವರು ಮುಂತಾದವರನ್ನು ಉದಾಹರಿಸಬಹುದು. ಹೀಗೆ ಅದೆಷ್ಟು ಹೆಣ್ಣುಮಕ್ಕಳು ಎಲ್ಲ ರಂಗದಲ್ಲೂ ಕೂಡ ಸಾಧನೆ ಮಾಡಿ ಸೈ ಎನಿಸಿಕೊಂಡಿದ್ದಾರೆ. ಭಾರತ ದೇಶ 140 ಕೋಟಿ ಜನಸಂಖ್ಯೆ ಹೊಂದಿದೆ ಎಂದು ಬೀಗುತ್ತಿರುವ ಪುರುಷಸಮಾಜ ಆ ಜನಸಂಖ್ಯೆಗೆ ಹೆಣ್ಣೇ ಕಾರಣ ಎಂಬುದು ಪುರುಷ ಮತ್ತು ಮಹಿಳಾ ಸಮಾಜ ನೆನಪಿಟ್ಟುಕೊಳ್ಳತಕ್ಕದ್ದು.

ಶಾಲೆಗೆ ಉಡುಪು ಧರಿಸಿ ಕಾಲಿಡುವ ಟೈಮ್ ಇಂದ ಹಿಡಿದು ಕೈಯಲ್ಲಿ ಪದವಿ ಪ್ರಮಾಣ ಪತ್ರ ಹಿಡಿಯುವಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಹೆಣ್ಣಿನ ಬಗ್ಗೆ ಹೇಳ್ತಾ ಹೋದ್ರೆ ಯುಗಗಳೇ ಬೇಕು ಎಂದು ಮಹಿಳಾ ಸಮಾಜ ಸೇವಕಿ ಡಾ. ನಾಗವೇಣಿ ಪತ್ರಿಕೆ ಹೇಳಿಕೆ ಮುಖಾಂತರ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend