ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತೆ ಕುರಿತು ಜಾಗೃತಿ ಜಾಥಾ ಬೀದಿನಾಟಕ ಕಾರ್ಯಕ್ರಮ…!!!

Listen to this article

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಸ್ಪೃಶ್ಯತೆ ಕುರಿತು ಜಾಗೃತಿ ಜಾಥಾ ಬೀದಿನಾಟಕ ಕಾರ್ಯಕ್ರಮ.

ಸಿಂಧನೂರು : ಕರ್ನಾಟಕ ಸರ್ಕಾರ ಜಿಲ್ಲಾ ಪಂಚಾಯತ್ ರಾಯಚೂರು ತಾಲೂಕು ಆಡಳಿತ , ಸಮಾಜ ಕಲ್ಯಾಣ ಇಲಾಖೆ ಸಿಂಧನೂರು ಸಿಂಚನ ಸಾಂಸ್ಕೃತಿಕ ಕಲಾ ಸಂಘ ಸಿಂಧನೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಅಸ್ಪೃಶ್ಯತೆ ನಿವಾರಣೆ ಕುರಿತು ಜಾಗೃತಿ ಜಾಥಾ ಹಾಗೂ ಬೀದಿ ನಾಟಕ ಕಾರ್ಯಕ್ರಮವನ್ನು ಕೆ ಹಂಚಿನಾಳ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಬೀದಿನಾಟಕ ಹಾಡುವುದರ ಮೂಲಕ ಜನರಿಗೆ ಅಸ್ಪೃಶ್ಯತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಹಗರಿಬೊಮ್ಮನಹಳ್ಳಿಯ ಕಲಾತಂಡದ ಕಲಾವಿದರಿಂದ ಬೀದಿನಾಟಕಗಳ ಮೂಲಕ ಜನರನ್ನು ರಂಜಿಸಿ ಅವರಿಗೆ ಸರಿಯಾದ ಮಾಹಿತಿಯನ್ನು ನೀಡಿ ಅಸ್ಪೃಶ್ಯತೆ ನಿವಾರಣೆಯಾಗಬೇಕು ಎಂಬುದರ ಬಗ್ಗೆ ಬೀದಿ ನಾಟಕದ ಮೂಲಕ ಜನರಿಗೆ ಮನವರಿಕೆ ಮಾಡಿಕೊಟ್ಟರು.

ಸಮಾಜ ಕಲ್ಯಾಣ ಅಧಿಕಾರಿ ಮಹಾಲಿಂಗಪ್ಪ ಇಂಗಳದಾಳ ಮಾತನಾಡಿ ಸರ್ಕಾರದಿಂದ ಅನೇಕ ಸೌಲಭ್ಯಗಳು ಎಸ್ಸಿಎಸ್ಟಿ ಜನರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಇದ್ದು ಅದನ್ನು ಸರಿಯಾಗಿ ಬಳಸಿಕೊಳ್ಳುತ್ತಿಲ್ಲ ಎಂದರು.ಓದುವ ವಿದ್ಯಾರ್ಥಿಗಳಿಗೆ ಮುರಾರ್ಜಿ ದೇಸಾಯಿ , ಕಿತ್ತೂರಾಣಿ ಚೆನ್ನಮ್ಮ ವಸತಿ ಶಾಲೆಗಳು ಹಾಗೂ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ, ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ವೇತನ ಸೌಲಭ್ಯ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಪಾಲಿಟೆಕ್ನಿಕ್, ಡಿಪ್ಲೋಮಾ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ದೌರ್ಜನ್ಯ ಪ್ರಕರಣದಲ್ಲಿ ನೊಂದ ಪರಿಶಿಷ್ಟ ಜಾತಿ ಪಂಗಡದ ಜನರಿಗೆ ಪರಿಹಾರ ನೀಡಲಾಗುತ್ತದೆ. ಅಂತರ್ಜಾತಿ ವಿವಾಹ ದಂಪತಿಗಳಿಗೆ ಪ್ರೋತ್ಸಾಹ ಧನ, ದೇವದಾಸಿ ಮಕ್ಕಳ ಮದುವೆಗೆ ಪ್ರೋತ್ಸಾಹಧನ,ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಸಹಾಯಧನ ಇನ್ನೂ ಅನೇಕ ಸೌಲಭ್ಯಗಳು ಇಲಾಖೆಯಲ್ಲಿ ಇದ್ದು ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಹೇಳಿದರು.

ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಶರಣು ಯಾದಗಿರಿ
ಅಟ್ರಾಸಿಟಿ ಕಾಯ್ದೆ ಬಗ್ಗೆ ಮತ್ತು ಸಮಾಜ ಕಲ್ಯಾಣ ಇಲಾಖೆ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ಜನರಿಗೆ ತಿಳಿಸಿದರು.

ಸಿಂಚನಾ ಸಾಂಸ್ಕೃತಿಕ ಕಲಾತಂಡ ಅಧ್ಯಕ್ಷರಾದ ಮೌಲಪ್ಪ ಮಾಡಶಿರವಾರ ಕಾರ್ಯಕ್ರಮದ ನಿರೂಪಣೆಯನ್ನು ಮಾಡಿದರು.

ಈ ಕಾರ್ಯಕ್ರಮದಲ್ಲಿ ಹನುಮಂತಪ್ಪ ಪಿಎಸ್ಐ ಸಿಂಧನೂರು, ಗ್ರಾ.ಪಂ. ಅಧ್ಯಕ್ಷರು ಸದಸ್ಯರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಊರಿನ ಮುಖಂಡರು ಭಾಗಿಯಾಗಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend