ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಂಧನೂರು, ಸಂಯುಕ್ತಾಶ್ರಯದಲ್ಲಿ “ಒಂದು ದಿನದ ಉದ್ಯಮಶೀಲತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು…!!!

Listen to this article

ಜೀವನೋಪಾಯ ಇಲಾಖೆ ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಸಿಡಾಕ್ ಧಾರವಾಡ, ಜಿಲ್ಲಾ ಕೈಗಾರಿಕಾ ಕೇಂದ್ರ ರಾಯಚೂರು, ಸಿಂಧನೂರು ತಾಲೂಕ ಇಂದಿರಾ ಗಾಂಧಿ ಸ್ತ್ರೀಶಕ್ತಿ ಒಕ್ಕೂಟ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಂಧನೂರು, ಸಂಯುಕ್ತಾಶ್ರಯದಲ್ಲಿ “ಒಂದು ದಿನದ ಉದ್ಯಮಶೀಲತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದ ಉದ್ಘಾಟಕರಾದ ಶ್ರೀಕಾಂತ್ T. ಬನ್ನಿಗೋಳ ಸಿಡಾಕ್ ರಾಯಚೂರು ರವರು ಉದ್ಯಮಶೀಲತೆ ಪ್ರೇರಣಾ ಕಾರ್ಯಕ್ರಮಗಳಿಗೆ ವಿದ್ಯಾರ್ಥಿಗಳು ಸ್ವಸಹಾಯ ಗುಂಪುಗಳ ಸದಸ್ಯರುಗಳು, ನಿರುದ್ಯೋಗಿ ಯುವಕ ಯುವತಿಯರು ಹಾಗೂ ವಿವಿಧ ಇಲಾಖೆಯ ಪ್ರಾಯೋಜಕತ್ವದ ಯೋಜನೆಗಳ ಪ್ರಯೋಜನ ದಾರರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಯೋಜನೆಯ ಲಾಭ ಪಡೆದುಕೊಳ್ಳಿ ಎಂದು ತಿಳಿಸಿದರು .
ನಂತರ ಮಾತನಾಡಿದ ಅಧ್ಯಕ್ಷತೆಯನ್ನು ವಹಿಸಿದ ಶ್ರೀದೇವಿ ಶ್ರೀನಿವಾಸ್ ಇಂದಿರಾಗಾಂಧಿ ಸ್ತ್ರೀ ಶಕ್ತಿ ಮಹಿಳಾ ಒಕ್ಕೂಟ ಅಧ್ಯಕ್ಷರು ಗ್ರಾಮೀಣ ಮಹಿಳೆಯರ ಸಬಲೀಕರಣ ಹಾಗೂ ಸ್ವಾವಲಂಬಿಗಳನ್ನಾಗಿಸುವುದೇ ಯೋಜನೆಯ ಮುಖ್ಯ ಉದ್ದೇಶ. ಸ್ತ್ರೀ ಶಕ್ತಿ ಯೋಜನೆಯನ್ನು ರಾಜ್ಯ ಸರ್ಕಾರ 2000-01ನೇ ಸಾಲಿನಲ್ಲಿ ಜಾರಿಗೊಳಿಸಲಾಗಿರುತ್ತದೆ .ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಳ್ಳುತ್ತಿದ್ದು , ಮಹಿಳೆಯರಲ್ಲಿ ಉಳಿತಾಯದ ಮನೋಭಾವ ಮೂಡಿಸುವುದರೊಂದಿಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆಯೂ ಜಾಗೃತಿಯನ್ನುಂಟು ಮಾಡಲಾಗುತ್ತದೆ. ಆರ್ಥಿಕ ಚಟುವಟಿಕೆಗಳಲ್ಲಿ ಸ್ವತಂತ್ರ ಬಾಳನ್ನುರೂಪಿಸಿಸಿಕೊಂಡಿರುವ ಈ ಸ್ವಾವಲಂಬಿ ಮಹಿಳೆಯರ ಬದುಕಿನಲ್ಲಿ ಹೊಸ ಚೈತನ್ಯ ಮೂಡಿದೆ. ಸಮಾಜದ ಬಡ ಕುಟುಂಬದ ಸಮಾನ ಸಾಮಾಜಿಕ ಅಥವಾ ಆರ್ಥಿಕ ಹಿನ್ನೆಲೆಯಲ್ಲಿ ಸಮಾನ ಮನಸ್ಸಿನ ಪರಸ್ಪರ ವಿಶ್ವಾಸದಿಂದ ಕೂಡಿದ 15ರಿಂದ 20 ಜನ ಮಹಿಳೆಯರು ಒಂದೆಡೆ ಸೇರಿ ತಮ್ಮ ಆರ್ಥಿಕ ಅಭಿವೃದ್ಧಿಗಾಗಿ ಸ್ವ ಇಚ್ಛೆಯಿಂದ ಉಳಿತಾಯ ಮಾಡುವುದು. ತಮ್ಮದೇ ಹಣವನ್ನು ಸ್ವಸಹಾಯ ತತ್ವದ ಮೂಲಕ ಸಾಲ ನೀಡಲಾಗುವುದು. ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರು, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಮಹಿಳೆಯರು, ಭೂರಹಿತ ಕೃಷಿ ಕಾರ್ಮಿಕರು , ಸಾಮಾಜಿಕ ಹಾಗೂ ಆರ್ಥಿಕ ಹಿನ್ನೆಲೆಯುಳ್ಳ ಮಹಿಳೆಯರು ಯೋಜನೆಯ ಲಾಭ ಪಡೆಯಲು ಮನವಿ ಮಾಡಿದರು
ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾದ ಶರಣಯ್ಯ ಹಿರೇಮಠ , ಚಂದ್ರಕಲಾ , ಪ್ರಸನ್ನಕುಮಾರ್, ಲಿಂಗರಾಜ ಸುದೀಪ್ ಕುಮಾರ್ ಶಿಶು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ,ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯರು, ದಲಿತ ಕನ್ನಡಪರ ಸಂಘಟನೆ ಪದಾಧಿಕಾರಿಗಳು , ನಿರುದ್ಯೋಗಿ ಯುವಕರು , ಮಹಿಳೆಯರು ಭಾಗವಹಿಸಿದ್ದರು..

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend