ಮಕ್ಕಳ ಸಾಹಿತ್ಯ ಕೃತಿಗಳು ಹಾಗೂ ಹೂವಿನ ಗಿಡಗಳ ನೀಡುವ ಮೂಲಕ ಶಾಲಾ ಪ್ರಾರಂಭೋತ್ಸದಂದು ವಿದ್ಯಾರ್ಥಿಗಳಿಗೆ ಸ್ವಾಗತ…!!!

Listen to this article

ಮಕ್ಕಳ ಸಾಹಿತ್ಯ ಕೃತಿಗಳು ಹಾಗೂ ಹೂವಿನ ಗಿಡಗಳ ನೀಡುವ ಮೂಲಕ ಶಾಲಾ ಪ್ರಾರಂಭೋತ್ಸದಂದು ವಿದ್ಯಾರ್ಥಿಗಳಿಗೆ ಸ್ವಾಗತ

ಕಲಿಕಾ ಚೇತರಿಕೆ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಅನುಕೂಲಕರವಾದ ಕಾರ್ಯಕ್ರಮವಾಗಿದೆ ಶ್ರೀ ಗಿರೀಶ್ ವಿ

ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ದುಗ್ಗಮ್ಮನ ಗುಂಡ ಶಾಲೆ ಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಮಳೆಬಿಲ್ಲು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಗಿರೀಶ ವಿ. CRP ಅವರು ಮಾತನಾಡಿದರು.

ಕೋವಿಡ್ ೧೯ ಕಾಲದಲ್ಲಿ ವಿದ್ಯಾರ್ಥಿಗಳ ಕಲಿಕೆಯಲ್ಲಿ ವ್ಯತ್ಯಾಸವಾಗಿದೆ. ವಿದ್ಯಾರ್ಥಿಗಳ ಕಲಿಕೆಯ ನಷ್ಟವಾಗಿದೆ. ವಿದ್ಯಾರ್ಥಿಗಳ ಕಲಿಕೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಸರಕಾರವು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ. ಕಲಿಕಾ ಚೇತರಿಕೆ ಕಾರ್ಯಕ್ರಮ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ ಎಂದು ಹೇಳಿದರು.

ಮಳೆಬಿಲ್ಲು 14 ದಿನಗಳ ಕಾರ್ಯಕ್ರಮ. ವಿದ್ಯಾರ್ಥಿಗಳಲ್ಲಿ ಕಲಿಕೆಯಲ್ಲಿ ಉತ್ಸಾಹದಿಂದ ತಮ್ಮನ್ನು ತೊಡಗಿಸಿಕೊಳ್ಳಲು ಅನುಕೂಲಕರವಾಗಿದೆ. 14 ದಿನವು ವಿದ್ಯಾರ್ಥಿಗಳಿಗೆ ವಿನೋದ ಚಟುವಟಿಕೆಗಳನ್ನು ಈ ಕಾರ್ಯಕ್ರಮಗಳ ಗೊಂಡಿದೆ. ಆಟಗಳು, ಕವಿತೆ ರಚನೆ, ನಾಟಕ ಪ್ರದರ್ಶನ, ಮಕ್ಕಳ ಹಬ್ಬ, ಚಿತ್ರಕಲೆ ಗಳನ್ನು ಒಳಗೊಂಡಂತೆ ವಿಭಿನ್ನವಾದ ಚಟುವಟಿಕೆಗಳನ್ನು ಮಳೆಬಿಲ್ಲು ಕಾರ್ಯಕ್ರಮ ಒಳಗೊಂಡಿದೆ ವಿದ್ಯಾರ್ಥಿಗಳಿಗೆ ಇದು ತುಂಬಾ ಉಪಯುಕ್ತವಾದ ಕಾರ್ಯಕ್ರಮವಾಗಿದೆ ಎಂದು ಶಾಲೆ ಮುಖ್ಯ ಗುರುಗಳು ಹಾಗೂ ಕಬ್ ಮಾಸ್ಟರ್ ಶಂಕರ ದೇವರು ಹಿರೇಮಠ ಅವರು ಹೇಳಿದರು

ಶ್ರೀ ವಿರೂಪಾಕ್ಷಪ್ಪ ಫಕೀರಪೂರ ಅವರು ಮಾತನಾಡಿ ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುವ ಜೊತೆಗೆ ಹಲವಾರು ವಿಶೇಷತೆಗಳನ್ನು ಹೊಂದಿವೆ. ಪಾಲಕರ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ದಾಖಲಿಸುವ ಮೂಲಕ ವಿದ್ಯಾರ್ಥಿಗಳಿಗೆ ಸರಕಾರಿ ಸೌಲಭ್ಯಗಳು ದೊರೆಯುವಂತೆ ಮಾಡಬೇಕೆಂದು ಹೇಳಿದರು.

ಸಮಾರಂಭದಲ್ಲಿ ಪಾಲಕರು ಹಾಗೂ ಪೋಷಕರು ಭಾಗವಹಿಸಿದ್ದರು. ಶಾಲೆ ಅಡುಗೆ ಸಿಬ್ಬಂದಿ ಮುಖ್ಯ ಅಡುಗೆಯವರು ಶ್ರೀಮತಿ ರೇಣುಕಾ ಅವರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಮಕ್ಕಳ ಸಾಹಿತ್ಯ ಕೃತಿಗಳನ್ನು ಹಾಗೂ ಹೂವಿನ ಗಿಡಗಳನ್ನು ನೀಡುವ ಮೂಲಕ ವಿದ್ಯಾರ್ಥಿಗಳನ್ನು ಶಾಲೆ ಯ ತರಗತಿಗಳಿಗೆ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳಿಗೆ ಪರಿಸರ ಪ್ರೇಮ ಹಾಗೂ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಲಾಯಿತು.

ಶಾಲಾ ಪ್ರಾರಂಭೋತ್ಸವ ಹಾಗೂ ಮಳೆಬಿಲ್ಲು ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಂತೋಷದಿಂದ ಭಾಗವಹಿಸಿದ್ದರು..

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend