ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ….!!!

Listen to this article

ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ.

ಸಿಂಧನೂರು : ಮೇ, 26 : ನಾಡಿನ ವಿಧ್ಯಾರ್ಥಿಗಳಿಗೆ ಹಾಗೂ ಯುವ ಜನರಿಗೆ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ವಿಚಾರಗಳನ್ನು ಹಾಗೂ ಅವರು ಮಾಡಿದ ಸಾಧನೆ,ರಾಜಕೀಯ,ಸಾಮಾಜಿಕ, ಅವರ ಜೀವನದ ಹೋರಾಟದ ಬಗೆಗಿನ ಪ್ರಶ್ನೆಗಳನ್ನು ಕೇಳುವುದರ ಮೂಲಕ ಸರಿಯಾದ ಉತ್ತರ ನೀಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡುವ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ತಿನ ಕಾರ್ಯ ಉತ್ತಮವಾದದ್ದು ಮತ್ತು ಪ್ರಶಂಸೆ ನೀಡುವ ಕೆಲಸ ಇದಾಗಿದೆ ಎಂದು ದಲಿತ ಮುಖಂಡ ಎಚ್.ಎನ್.ಬಡಿಗೇರ್ ಅವರು ಹೇಳಿದರು.

ಇಂದು ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 131ನೇ ಜಯಂತಿಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ ಹಮ್ಮಿಕೊಂಡಿರುವ ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.

ನಂತರ ಮಾತನಾಡಿದ ಎಂ. ಗಂಗಾಧರ್ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಕುರಿತು ಇಂತಹ ಸ್ಪರ್ಧಾತ್ಮಕ ಪರೀಕ್ಷೆ ಮಾಡುವ ಮೂಲಕ ಅವರ ವಿಚಾರಧಾರೆಯನ್ನು ಎಲ್ಲಾ ವಿಧ್ಯಾರ್ಥಿಗಳಿಗೂ ಹಾಗೂ ಯುವಜನರಿಗೆ ತಲುಪಿಸಲು ಸಹಾಯಕವಾಗುತ್ತದೆ. ತಾಲೂಕಿನ ವಿಧ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿಜೇತರಾಗಲಿ ಎಂದರು.

ಇದೇ ವೇಳೆ ಮಾತನಾಡಿದ ಮೌನೇಶ್ ಜಾಲವಾಡಗಿ
ಜಿಲ್ಲಾ ಸಂಚಾಲಕರು ದಲಿತ ವಿದ್ಯಾರ್ಥಿ ಪರಿಷತ್ತು ರಾಯಚೂರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತು ಈ ರೀತಿ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಡೆಯುತ್ತಿರುವುದು ರಾಜ್ಯದಲ್ಲಿ ಇದೆ ಪ್ರಥಮ ಬಾರಿಗೆ ಮತ್ತು ಬಾಬಾಸಾಹೇಬರ ಕುರಿತಾದ ಈ ಸ್ಪರ್ಧಾತ್ಮಕ ಪರೀಕ್ಷೆ ಕೇವಲ ಪರೀಕ್ಷೆಯಾಗದೆ ವಿದ್ಯಾರ್ಥಿಗಳಲ್ಲಿ ಅಂಬೇಡ್ಕರ್ ಅವರ ಸಾಧನೆ ಮತ್ತು ಅವರ ಸಂಘರ್ಷದ ಜೀವನ ಬಗ್ಗೆ ತಿಳಿಯಲು ಇದೊಂದು ಸುವರ್ಣ ಅವಕಾಶ ಅದರೊಂದಿಗೆ ಪ್ರಥಮ ಸ್ಥಾನ ಪಡೆದ ಅಭ್ಯರ್ಥಿಗೆ 3 ಲಕ್ಷ, ದ್ವಿತೀಯ ಸ್ಥಾನ ಪಡೆದ ಅಭ್ಯರ್ಥಿಗೆ 2 ಲಕ್ಷ ಹಾಗೂ ತೃತೀಯ ಸ್ಥಾನ ಪಡೆದ ಅಭ್ಯರ್ಥಿಗೆ 1 ಲಕ್ಷ ಬಹುಮಾನ ನೀಡಲಾಗುವುದು.ನೊಂದಣಿ ಮಾಡಿಕೊಳ್ಳಲು 15 ಜೂನ್ 2022 ಕೊನೆಯ ದಿನಾಂಕವಾಗಿದ್ದು ಪ್ರವೇಶ ಶುಲ್ಕ 100 ಆಗಿದೆ. ಹೀಗಾಗಿ ಈ ಪರೀಕ್ಷೆಯಲ್ಲಿ ಜಿಲ್ಲೆಯ ವಿಧ್ಯಾರ್ಥಿಗಳು ಹಾಗೂ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದ್ದರು.

ಈ ವೇಳೆ ಮಾತನಾಡಿದ ದಲಿತ ಸಾಹಿತ್ಯ ಪರಿಷತ್ತು ಅಧ್ಯಕ್ಷ ಹುಸೇನಪ್ಪ ಅಮರಾಪುರ ಸ್ಪರ್ಧೆಯಲ್ಲಿ 15 ರಿಂದ 35 ವರ್ಷ ವಯೋಮಾನದ ವಿಧ್ಯಾರ್ಥಿಗಳು, ಯುವಜನರು, ನೋಂದಣಿ ಮಾಡಿಕೊಂಡು, 100 ಜನರಿಗೆ ಉಚಿತ ತರಬೇತಿ ನೀಡಿ ,ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿಜೇತರಿಗೆ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಗೌರವಿಸಿ ಬಹುಮಾನ ನೀಡಲಾಗುವುದು ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ಶಿವರಾಜ್ ಉಪ್ಪಲದೊಡ್ಡಿ,ರವಿ ನವಲಹಳ್ಳಿ, ಶಿವರಾಜ ಕೆ. ಹಾಗೂ ದಲಿತ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು ವಿವಿಧ ಸಂಘಟನೆಯ ಮುಖಂಡರು ಇದ್ದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend