ಡಿಜಿಟಲ್ ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಿ – ಸಚಿವ ಶಂಕರ್ ಬಿ. ಪಾಟೀಲ ಮುನೇನಕೊಪ್ಪ…!!!

Listen to this article

ಡಿಜಿಟಲ್ ಗ್ರಂಥಾಲಯ ಸದ್ಬಳಕೆ ಮಾಡಿಕೊಳ್ಳಿ – ಸಚಿವ ಶಂಕರ್ ಬಿ. ಪಾಟೀಲ ಮುನೇನಕೊಪ್ಪ

ಸಿಂಧನೂರು : ಜೂನ್ 14. ಗ್ರಂಥಾಲಯದಲ್ಲಿ ಮಕ್ಕಳಿಗೆ ಓದುವ ಪುಸ್ತಕಗಳು ಸೇರಿದಂತೆ ಕಂಪ್ಯೂಟರ್ ಜ್ಞಾನವನ್ನು ಪಡೆಯಲು ಅನುಕೂಲ ಕಲ್ಪಿಸಲಾಗಿದೆ ತಾಲೂಕಿನ ಸಾರ್ವಜನಿಕರು, ವಿಧ್ಯಾರ್ಥಿಗಳು ಈ ಡಿಜಿಟಲ್ ಗ್ರಂಥಾಲಯದ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಮತ್ತು ಸಕ್ಕರೆ ಸಚಿವ ಶಂಕರ್ ಬಿ. ಪಾಟೀಲ ಮುನೇನಕೊಪ್ಪ ತಿಳಿಸಿದರು.

ನಗರದ ನೀರಾವರಿ ಇಲಾಖೆ ಮೈದಾನದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರದ ಉದ್ಘಾಟನೆ, ಸಂಚಾರಿ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ, ಹಾರಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ನಿರ್ಮಾಣ, ಹಾಗೂ ಗುಂಜಳ್ಳಿ, ವಲ್ಕ೦ದಿನ್ನಿ ನಾಡ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಹಾಕಿ ಅವರು ಮಾತನಾಡಿದರು.

ಸ್ಥಳೀಯ ಶಾಸಕರಾದ ವೆಂಕಟರಾವ್ ನಾಡಗೌಡರು ಅಭಿವೃದ್ಧಿ ಪರವಾದ ಕೆಲಸ ಮಾಡಿಕೊಂಡು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಅವರದು ನಮ್ಮದು ಬೇರೆ ಬೇರೆ ಪಕ್ಷದ ಬಾವುಟ ಹಿಡಿದು ರಾಜಕಾರಣ ಮಾಡುತ್ತೇವೆ ಆದರೆ ಅಭಿವೃದ್ಧಿ ವಿಷಯಕ್ಕೆ ಸಂಪೂರ್ಣ ಸಹಕಾರ ನೀಡುತ್ತೆವೆಂದರು.ಪ್ರದಾನಿ ನರೇಂದ್ರ ಮೋದಿಯವರು ಕೇಂದ್ರ ಸರಕಾರ 112 ಜಿಲ್ಲೆಗಳನ್ನು ಮಹತ್ವಾಕಾಂಕ್ಷಿಗಳಾಗಿ ಗುರುತಿಸಿದೆ ಅದರಲ್ಲಿ ರಾಯಚೂರು ಜಿಲ್ಲೆಯು ಸಹ ಒಂದಾಗಿದೆ.ಶಾಸಕರು, ಸಂಸದರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವದಾಗಿ ತಿಳಿಸಿದರು.

ಶಾಸಕ ವೆಂಕಟರಾವ್ ನಾಡಗೌಡ ಅವರು ಜನರು ತಮ್ಮಮೇಲೆ ಇಟ್ಟಿರುವ ವಿಶ್ವಾಸವನ್ನು ಉಳಿಸಿಕೊಂಡು ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸುತ್ತಿದ್ದಾರೆ. ರೈಲ್ವೆ ಯೋಜನೆಗೆ ರಾಜ್ಯ ಸರಕಾರ ಪಾಲು ಬಿಡುಗಡೆಯಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನ ಹರಿಸಬೇಕು. ಸಿಂಧನೂರಿಗೆ ಮೆಡಿಕಲ್‌ ಕಾಲೇಜು, ಕೇಂದೀಯ ವಿಶ್ವ ವಿದ್ಯಾಲಯಗಳ ಸ್ಥಾಪನೆಗೆ ಪ್ರಯತ್ನಿಸುವೆ.ರಾಯಚೂರು ನಗರಕ್ಕೆ ವಿಮಾನ ನಿಲ್ದಾಣ ಮಂಜೂರು, 200 ರಿಂದ 300 ಎಕರೆ ಸರಕಾರಿ ಜಮೀನು ಇದ್ದರೆ ಜವಳಿ ಪಾರ್ಕ ಮಾಡಲು ಸಚಿವರು ತಿಳಿಸಿದ್ದಾರೆ. ಸಿಂಧನೂರನ್ನು ಜಿಲ್ಲಾ ಕೇಂದ್ರವನ್ನಾಗಿ ಮಾಡಬೇಕು ಎಂಬ ಬೇಡಿಕೆಯನ್ನು ಈಡೇರಿಸುವಂತೆ ತಾಲೂಕಿನ ಜನತೆಯ ಪರವಾಗಿ ಸಚಿವರಲ್ಲಿ ಮನವಿ ಮಾಡಿದರು. ಮುಖ್ಯಮಂತ್ರಿಗಳು ನಗರಕ್ಕೆ ಬೈಪಾಸ್ ರಸ್ತೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಸಂಸದರಾದ ಸಂಗಣ್ಣ ಕರಡಿ ಮಾತನಾಡಿದರು.

ಶಾಸಕ ವೆಂಕಟರಾವ್ ನಾಡಗೌಡ ಮಾತನಾಡುತ್ತಾ ನಮಗೆ ಡಿಜಿಟಲ್ ಗ್ರಂಥಾಲಯದಲ್ಲಿ ಓದಲು ಅವಕಾಶ ಸಿಗಲಿಲ್ಲ ಆದರೆ ನಮ್ಮ ಮಕ್ಕಳಿಗಾದರೂ ಓದಲು ಡಿಜಿಟಲ್ ಗ್ರಂಥಾಲಯ ನಿರ್ಮಿಸುವ ಅವಕಾಶವನ್ನು ದೇವರು ನಮಗೆ ಒದಗಿಸಿ ಕೊಟ್ಟಿದ್ದಾನೆ.ನಗರದಲ್ಲಿ ಎ.ಆರ್.ಟಿ.ಒ ಕಛೇರಿ , ಎ.ಸಿ ಕಛೇರಿ ,ಜಿಲ್ಲಾ ನ್ಯಾಯಾಲಯ ಮಂಜೂರು ಮಾಡಿಕೊಟ್ಟು ಸಚಿವರು ಸಿಹಿ ಸುದ್ದಿಯನ್ನು ಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಎಲ್ಲಾ ಸೌಲಭ್ಯದೊಂದಿಗೆ ಸುಂದರ ಗ್ರಂಥಾಲಯ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು ಹಾಗೂ ನಾಗರೀಕರ ಗ್ರಂಥಾಲಯವಾಗಿದ್ದು, ಇಲ್ಲಿಂದ ಹೆಚ್ಚಿನ ಜ್ಞಾನ ಪಡೆದು ದೇಶಕ್ಕೆ ಕೀರ್ತಿ ತರುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ, ಪೋಲಿಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಜಿಲ್ಲಾ ಪಂಚಾಯತ್ ಸಿಇಓ ನೂರಜಹಾನ್ ಬೇಗಂ,ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಮದ್ವರಾಜ ಆಚಾರ್ಯ, ಮಾಜಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮರೇಗೌಡ ವಿರುಪಾಪೂರು, ಶಿವುನಗೌಡ ಗೋರೆಬಾಳ, ತಹಸೀಲ್ದಾರ ಮಂಜುನಾಥ ಭೋಗಾವತಿ, ಡಿ.ವಾಯ್.ಎಸ್.ಪಿ. ವೆಂಕಟಪ್ಪ ನಾಯಕ, ಭೂಸ್ವಾಧೀನ ಅಧಿಕಾರಿ ಶೃತಿ ಕೆ. ಅಯ್ಯನಗೌಡ ಟಿಎಚ್ಓ, ಇನ್ನಿತರ ಅಧಿಕಾರಿಗಳು ಇದ್ದರು…

ವರದಿ. ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend