ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ…!!!

Listen to this article

ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ

ಸಿಂಧನೂರು : ಅ. 30.ಜೆಡಿಎಸ್ ತೊರೆದು ಕಾರ್ಯಕರ್ತರು ಹಾಗೂ ಮುಖಂಡರು ಮಾಜಿ ಶಾಸಕ ಹಂಪನಗೌಡ ಬಾದರ್ಲಿಯವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ಇಂದು ನಗರದ ಅವರ ನಿವಾಸದಲ್ಲಿ ಹಂಚಿನಾಳ ಕೆ. ಗ್ರಾಮದ ಲಿಂಗರಾಜ ಪಾಟೀಲ್,ಮಲ್ಲಿಕಾರ್ಜುನ ಪಾಟೀಲ್, ಶರಣೇಗೌಡ, ವಿರೇಶ ಹಂಚಿನಾಳ ಸೇರಿದಂತೆ ಅನೇಕ ಯುವಕರು ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಹಂಪನಗೌಡ ಬಾದರ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದ ಪರ ಇದ್ದು,ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗಬಲಿದಾನ ಮಾಡಿದೆ. ಸ್ವಾತಂತ್ರ ಪೂರ್ವ ಹಾಗೂ ನಂತರದಲ್ಲಿ ಕಾಂಗ್ರೆಸ್ ನ ಕೊಡುಗೆ ಮತ್ತು ಚರಿತ್ರೆಯನ್ನು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನಾಧ್ಯಂತ ಪಾದಯಾತ್ರೆ ಮಾಡಿ ಜನರಿಗೆ ಕರಪತ್ರ ಹಂಚುವುದರ ಮೂಲಕ ಜಾಗೃತಿ ಮೂಡಿಸಲಾಗಿದೆ. ಎಲ್ಲಾ ಸಮುದಾಯದವರನ್ನು ಒಗ್ಗೂಡಿಸಿ ದೇಶ ಕಟ್ಟಲು ಪಣತೂಟ್ಟಿದೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ನಂಬಿ ಪಕ್ಷಕ್ಕೆ ಬಂದಿರುವುದು ಸಂತಸ ತಂದಿದೆ. ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವುಕುಮಾರ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಿದ್ದು ಎಲ್ಲರೂ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ಕಾಂಗ್ರೆಸ್ ಪಕ್ಷದ ಭಾವುಟ ಹಿಡಿದು ಸೇರ್ಪಡೆಯಾದ ನಂತರ ಮಾತನಾಡಿದ ಲಿಂಗರಾಜ ಪಾಟೀಲ್ ನಾನು ಜೆಡಿಎಸ್ ನಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದಲ್ಲಿ ದುಡಿದಿದ್ದೇನೆ,ಆದರೆ ನಮ್ಮ ಗ್ರಾಮದ ಶಾಲೆಯ ಅಭಿವೃದ್ಧಿಗಾಗಿ ಕೊಠಡಿಗಳನ್ನು ಮಂಜೂರು ಮಾಡಿಸಲು ಶಾಸಕರ ಬಳಿ ಕೇಳಿದ್ದೇ ಆದರೆ ಅವರು ಕೊಡದಿದ್ದ ಕಾರಣ ನಾನು ಜೆಡಿಎಸ್ ಪಕ್ಷವನ್ನು ಬಿಟ್ಟು ಗ್ರಾಮದ ಯುವಕರ ಜೊತೆಗೂಡಿ ಕಾಂಗ್ರೆಸ್ ಪಕ್ಷವನ್ನು ಸೇರಿದ್ದೇವೆ ಎಂದರು.

ಈ ಸಂದರ್ಭದಲ್ಲಿ ನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪಂಪನಗೌಡ ಬಾದರ್ಲಿ, ಖಾಜಿ ಮಲ್ಲಿಕ್, ನಗರಸಭೆ ಅಧ್ಯಕ್ಷರಾದ ಮಲ್ಲಿಕಾರ್ಜುನ ಪಾಟೀಲ್, ಜಾಫರ್ ಅಲಿ ಜಾಹಗೀರದಾರ, ಅನೀಲ್ ಕುಮಾರ ಸೇರಿದಂತೆ ಮುಖಂಡರು ಇದ್ದರು…

ವರದಿ.ದುಗ್ಗಪ್ಪ ಸಿಂಧನೂರು

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend