ಜನ ವಿರೋಧಿ ಕಾನೂನು ತಡೆಯಲು ಕಾಂಗ್ರೆಸ್ ನ ಗೆಲುವು ಅನಿವಾರ್ಯ: ಡಾ.ಜಿ.ಪರಮೇಶ್ವರ್…!!!

Listen to this article

ಜನ ವಿರೋಧಿ ಕಾನೂನು ತಡೆಯಲು ಕಾಂಗ್ರೆಸ್ ನ ಗೆಲುವು ಅನಿವಾರ್ಯ: ಡಾ.ಜಿ.ಪರಮೇಶ್ವರ್…

ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲದ ಬಿಜೆಪಿ ಎಲ್ಲರೊಂದಿಗೆ ಮೈತ್ರಿ ಮಾಡಿಕೊಂಡು ವಾಮಮಾರ್ಗದಲ್ಲಿ ಅಧಿಕಾರ ಹಿಡಿದು ಬಿಜೆಪಿಯನ್ನು ತಿರಸ್ಕರಿಸಬೇಕು ಎಂದು ಮಾಜಿ ಶಾಸಕ ಪರಮೇಶ್ವರ್ ಹೇಳಿದರು.

ನಗರ ಕಲ್ಪತರು ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರ ಜನವಿರೋಧಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆದ್ದರೆ ಹೆಚ್ಚಿನ ಬಲ ಬರುತ್ತದೆ. ಜನ ವಿರೋಧಿ ಕಾನೂನನ್ನು ಜಾರಿಯಾಗದಂತೆ ತಡೆಯಲು ಕಾಂಗ್ರೆಸ್ ಗೆಲುವು ಅನಿವಾರ್ಯ ಎಂದು ಹೇಳಿದರು.

ಮಾಜಿ ಶಾಸಕ ಕೆ.ಷಡಕ್ಷರಿ ಮಾತನಾಡಿ, ಜಿಲ್ಲೆ ಹಾಗೂ ತಾಲೂಕಿನಲ್ಲಿ ಜನಪ್ರತಿನಿಧಿಗಳ ಮೇಲೆ ಇಟ್ಟಿರುವ ನಂಬಿಕೆ ಉಳಿಸಿಕೊಳ್ಳಲು ಕಾಂಗ್ರೆಸ್ಸಿಗೆ ಮತವನ್ನು ನೀಡಬೇಕೆಂದು ಚುನಾಯಿತ ಪ್ರತಿನಿಧಿಗಳನ್ನು ಕೇಳಿಕೊಂಡರು.

ಎಸ್.ಪಿ.ಮುದ್ದಹನುಮೇಗೌಡ ಮಾತನಾಡಿ, ಜನವಿರೋಧಿ ಕಾಯ್ದೆಗಳನ್ನು ತಡೆಗಟ್ಟಲು ಕಾಂಗ್ರೆಸ್ಸಿಗೆ ಹೆಚ್ಚು ಸ್ಥಾನವನ್ನು ಗೆಲ್ಲುವುದು ಅನಿವಾರ್ಯವಾಗಿದೆ ಎಂದರು.

ಮಾಜಿ ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿಧಾನಪರಿಷತ್ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ. ಇದು ದೂರವಾಗಲು ಜನಪ್ರತಿನಿಧಿಗಳ ವಿಶ್ವಾಸವನ್ನು ಗಳಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎನ್. ರಾಜಣ್ಣ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಯ್ಯ ಘಟಕದ ಅಧ್ಯಕ್ಷ ಕಾಂತರಾಜ್ ಜಿಲ್ಲಾ ಪಂಚಾಯಿತಿ ಸದಸ್ಯ ನಾರಾಯಣ್ ಮಾಜಿ ತಾಲೂಕು ಅಧ್ಯಕ್ಷ ಅಲ್ಪಸಂಖ್ಯಾತರ ಘಟಕದ ಯುವ ಮುಖಂಡ ಕಾಂಗ್ರೆಸ್ ಮುಖಂಡ ನಿಖಿಲ್ ರಾಜಣ್ಣ ಹಾಗೂ ನಗರ ಪಾಲಿಕೆ ಸದಸ್ಯ ಕುಮಾರಣ್ಣ ಇದ್ದರು…

ವರದಿ.ಪ್ರತಾಪ್, ಸಿ, ಹರಪನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend