ಛಲವಾದಿ ಮಹಾಸಭಾ ಘಟಕದ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳು…!!!

Listen to this article

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹರಪನಹಳ್ಳಿ ತಾಲೂಕು ಛಲವಾದಿ ಮಹಾಸಭಾ ಘಟಕದ ವತಿಯಿಂದ ಹುಟ್ಟುಹಬ್ಬದ ಶುಭಾಶಯಗಳು.

ಕರ್ನಾಟಕ ಕಾಂಗ್ರೆಸ್ಸಿನ ಅತ್ಯಂತ ಪ್ರಮುಖ ರಾಜಕಾರಣಿಗಳಲ್ಲೇ ಒಬ್ಬರಾಗಿದ್ದಾರೆ.

ವಯಕ್ತಿಕ ಜೀವನ
ಪೂರ್ಣ ಹೆಸರು
ಮಲ್ಲಿಕಾರ್ಜುನ ಖರ್ಗೆ
ಜನ್ಮ ದಿನಾಂಕ
21 Jul 1942ಹುಟ್ಟಿದ ಸ್ಥಳ
ವರವಟ್ಟಿ, ಭಾಲ್ಕಿ ತಾಲ್ಲೂಕು, ಬೀದರ ಜಿಲ್ಲೆಪಕ್ಷದ ಹೆಸರು
Indian National Congress
ವಿದ್ಯಾರ್ಹತೆ
Graduate Professional
ಉದ್ಯೋಗರಾಜಕಾರಣಿ ಮತ್ತು ನ್ಯಾಯವಾದಿ ತಂದೆಯ ಹೆಸರು
ಮಾಪಣ್ಣಾ,ತಾಯಿಯ ಹೆಸರು
ಸೈಬವ್ವಾಅವಲಂಬಿತರ ಹೆಸರು
ರಾಧಾಬಾಯಿ,ಅವಲಂಬಿತರ ಉದ್ಯೋಗ ಹೌಸ್ ವೈಫ್
ಮಕ್ಕಳು 3 ಪುತ್ರ(ರು) 2 ಪುತ್ರಿ(ಯರು)
ಮಲ್ಲಿಕಾರ್ಜುನ ಖರ್ಗೆ ಇವರು ಕರ್ನಾಟಕ ಕಾಂಗ್ರೆಸ್ಸಿನ ಅತ್ಯಂತ ಪ್ರಮುಖ ರಾಜಕಾರಣಿಗಳಲ್ಲೊಬ್ಬರಾಗಿದ್ದಾರೆ. ಇವರು 16 ನೇ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ನಾಯಕರಾಗಿದ್ದಾರೆ. ಗುಲಬರ್ಗಾ ಲೋಕಸಭಾ ಕ್ಷೇತ್ರದಿಂದ ಇವರು ಲೋಕಸಭೆಗೆ ಆಯ್ಕೆಯಾಗಿದ್ದಾರೆ.

ಈ ಮುಂಚೆ ಕೇಂದ್ರದ ರೈಲ್ವೆ ಸಚಿವರಾಗಿ ಇವರು ಸೇವೆ ಸಲ್ಲಿಸಿದ್ದಾರೆ. ರಾಜಕೀಯ, ಕಾನೂನು ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಅಪಾರ ಅನುಭವ ಹೊಂದಿರುವ ಇವರು ಸಾರ್ವಜನಿಕ ಜೀವನದಲ್ಲಿಯೂ ಅತ್ಯಂತ ಶುದ್ಧಹಸ್ತ ರಾಜಕಾರಣಿಯಾಗಿ ಹೆಸರು ಮಾಡಿದ್ದಾರೆ.

ಪ್ರಸ್ತುತ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಧಿಕೃತ ನಾಯಕರಾಗಿ ಇವರನ್ನು ನೇಮಿಸಲಾಗಿದೆ. ಇವರು ಸತತವಾಗಿ 10 ಬಾರಿ ಚುನಾವಣೆಗಳಲ್ಲಿ ಜಯ ಸಾಧಿಸಿದ ದಾಖಲೆಯನ್ನು ಹೊಂದಿದ್ದಾರೆ. ಸತತವಾಗಿ 9 ಬಾರಿ ವಿಧಾನಸಭಾ ಚುನಾವಣೆಗಳು ಹಾಗೂ 10ನೇ ಬಾರಿ ಗುಲಬರ್ಗಾ ಕ್ಷೇತ್ರದಿಂದ ಲೋಕಸಭಾ ಚುನಾವಣೆಯಲ್ಲಿ ಜಯ ದಾಖಲಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಖರ್ಗೆಯವರು 40 ವರ್ಷಗಳ ಕಾಲ ಶಾಸಕ ಹಾಗೂ 5 ವರ್ಷ ಸಂಸದರಾಗಿ ಸೇವೆ ಸಲ್ಲಿಸಿದ್ದಾರೆ.

ಆಸಕ್ತಿಕರ ಅಂಶಗಳು
ಪುಸ್ತಕಗಳನ್ನು ಓದುವುದರಲ್ಲಿ ಅಪಾರ ಆಸಕ್ತಿ ಹೊಂದಿರುವ ಖರ್ಗೆ, ಪ್ರಗತಿಪರ ಚಿಂತಕರಾಗಿದ್ದಾರೆ. ಮೂಢನಂಬಿಕೆ ಹಾಗೂ ಕಂದಾಚಾರಗಳ ವಿರುದ್ಧ ಇವರು ಸತತವಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ.
ಕಬಡ್ಡಿ, ಹಾಕಿ ಹಾಗೂ ಕ್ರಿಕೆಟ್ ಆಟಗಳಲ್ಲಿಯೂ ಇವರು ಆಸಕ್ತಿಯನ್ನು ಹೊಂದಿದ್ದಾರೆ.
ಆರಂಭದಲ್ಲಿ ಗುಲಬರ್ಗಾದಲ್ಲಿ ವಿದ್ಯಾರ್ಥಿ ಒಕ್ಕೂಟದ ನಾಯಕನಾಗಿ ಆಯ್ಕೆಯಾಗುವುದರ ಮೂಲಕ ಇವರು ವಿದ್ಯಾರ್ಥಿಗಳ ಮುಖಂಡರಾಗಿ ತಮ್ಮ ರಾಜಕೀಯ ಜೀವನ ಆರಂಭಿಸಿದರು.
ರಾಜಕೀಯ ಕಾಲಾನುಕ್ರಮ

2014 ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೆ ಗುಲಬರ್ಗಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಇವರು ತಮ್ಮ ಸಮೀಪದ ಬಿಜೆಪಿ ಅಭ್ಯರ್ಥಿಯನ್ನು 73 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿ ಸಂಸದರಾಗಿ ಆಯ್ಕೆಯಾದರು. ಇದೇ ವರ್ಷದ ಜೂನ್ ತಿಂಗಳಲ್ಲಿ ಲೋಕಸಭೆಯ ಕಾಂಗ್ರೆಸ್ ಪಕ್ಷದ ಅಧಿಕೃತ ನಾಯಕನಾಗಿ ಖರ್ಗೆ ಅವರನ್ನು ನೇಮಿಸಲಾಯಿತು.

2009 ರಲ್ಲಿ ಗುಲಬರ್ಗಾ ಲೋಕಸಭಾ ಕ್ಷೇತ್ರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಕಣಕ್ಕಿಳಿದ ಖರ್ಗೆ ಸತತ 10 ನೇ ಬಾರಿ ಜಯಿಸುವ ಮೂಲಕ ಸಂಸದರಾಗಿ ಆಯ್ಕೆಯಾದರು.

2008 ರಲ್ಲಿ ಚಿತ್ತಾಪುರ ವಿಧಾನ ಸಭಾ ಕ್ಷೇತ್ರದಿಂದ ದಾಖಲೆಯ ಒಂಭತ್ತನೆ ಬಾರಿಗೆ ಖರ್ಗೆ ಶಾಸಕರಾಗಿ ಆಯ್ಕೆಯಾದರು. 2004 ಚುನಾವಣೆಗೆ ಹೋಲಿಸಿದಲ್ಲಿ 2008 ರ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ತೋರಿದರೂ ಅದರ ಬಹುತೇಕ ಪ್ರಮುಖ ನಾಯಕರು ಚುನಾವಣೆಯಲ್ಲಿ ಸೋತ ಕಾರಣ ಬಹುಮತ ಪಡೆಯಲಾಗಲಿಲ್ಲ. ಈ ಸಂದರ್ಭದಲ್ಲಿ ಖರ್ಗೆ ಎರಡನೆ ಬಾರಿ ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕನಾಗಿ ನೇಮಕವಾದರು.
2005 ರಲ್ಲಿ ಖರ್ಗೆಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ (ಕೆಪಿಸಿಸಿ) ಅಧ್ಯಕ್ಷರಾದರು. ಇವರು ಅಧ್ಯಕ್ಷರಾಗಿ ಕೆಲವೇ ತಿಂಗಳಲ್ಲಿ ನಡೆದ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಎದುರಾಳಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಗಿಂತಲೂ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿತು. ಈ ಜಯದಿಂದ ಗ್ರಾಮೀಣ ಭಾಗದಲ್ಲಿ ಕಾಂಗ್ರೆಸ್ ಮತ್ತೆ ಚೇತರಿಸಿಕೊಳ್ಳಲು ಸಹಕಾರಿಯಾಯಿತು.

2004 ರಲ್ಲಿ ಎಂಟನೆ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ತೀರಾ ಹತ್ತಿರ ಬಂದರೂ ಮುಖ್ಯಮಂತ್ರಿ ಪಟ್ಟ ಇವರಿಗೆ ಒಲಿಯಲಿಲ್ಲ. ಈ ಸಂದರ್ಭದಲ್ಲಿ ಧರ್ಮಸಿಂಗ್ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಸಾರಿಗೆ, ಜಲ ಸಂಪನ್ಮೂಲ ಸಚಿವರಾಗಿ ನೇಮಕಗೊಂಡರು.

ಹಿಂದಿನ ಇತಿಹಾಸ
1969 ರಲ್ಲಿ ಖರ್ಗೆಯವರು ಎಂಎಸ್‌ಕೆ ಮಿಲ್ ಕಾರ್ಮಿಕ ಯೂನಿಯನ್ನಿನ ಕಾನೂನು ಸಲಹೆಗಾರರಾಗಿ ನೇಮಕಗೊಂಡರು.

ಸಂಯುಕ್ತ ಮಜ್ದೂರ್ ಸಂಘದ ಪ್ರಭಾವಿ ಹೋರಾಟಗಾರಲ್ಲೊಬ್ಬರಾಗಿ ಹೊರಹೊಮ್ಮಿದ ಖರ್ಗೆ ಕಾರ್ಮಿಕರ ಹಕ್ಕುಗಳಿಗಾಗಿ ಸಾಕಷ್ಟು ಹೋರಾಟಗಳನ್ನು ನಡೆಸಿದರು.

ಇದೇ ವರ್ಷ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಸೇರಿದ ಇವರು ಗುಲಬರ್ಗಾ ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡರು.
60 ರ ದಶಕದ ಆರಂಭಿಕ ವರ್ಷಗಳಲ್ಲಿ.

ಗುಲಬರ್ಗಾದ ನೂತನ ವಿದ್ಯಾಲಯ ಶಾಲೆಯಲ್ಲಿ ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಮುಗಿಸಿದ ಖರ್ಗೆ, ನಂತರ ಗುಲಬರ್ಗಾದ ಸರಕಾರಿ ಮಹಾವಿದ್ಯಾಲಯದಲ್ಲಿ ಬಿಎ ಪದವಿ ಪಡೆದುಕೊಂಡರು. ಇದರ ನಂತರ ಗುಲಬರ್ಗಾದ ಸೇಠ ಶಂಕರಲಾಲ ಲಾಹೋಟಿ ಕಾನೂನು ಮಹಾವಿದ್ಯಾಲಯದಿಂದ ಕಾನೂನು ಪದವಿ ಪಡೆದರು.

ಗುಲಬರ್ಗಾದ ಸರಕಾರಿ ಮಹಾವಿದ್ಯಾಲಯದಲ್ಲಿ ಪದವಿ ಶಿಕ್ಷಣ ಪಡೆಯುತ್ತಿರುವಾಗಲೇ ಇವರು ಕಾಲೇಜು ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜೀವನಕ್ಕೆ ಮುನ್ನುಡಿ ಬರೆದಿದ್ದರು.

ಹುಟ್ಟುಹಬ್ಬದ ಶುಭಾಶಯಗಳು ಕೋರುವವರು
ಪ್ರತಾಪ್ ಛಲವಾದಿ
ಹರಪನಹಳ್ಳಿ ತಾಲ್ಲೂಕು ಛಲವಾದಿ ಮಹಾಸಭಾ ಘಟಕದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಹಿರಿಯ ಮುಖಂಡರುಗಳು ತಾಲೂಕು ದಲಿತ ವಿದ್ಯಾರ್ಥಿ ಪರಿಷತ್ ಸಂಚಾಲಕರು…

ವರದಿ. ಪ್ರತಾಪ್, ಸಿ, ಹರಪನಹಳ್ಳಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend