ಗಂಗಾ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಗಂಗಾ ಸಮೂಹ ವಿದ್ಯಾಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ವಿಜೃಂಭಣೆ ಯಿಂದ ಆಚರಿಸಲಾಯಿತು. ಕನ್ನಡ ನಾಡಿನ ಕಲೆ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿತ್ತರಿಸುವ ನೃತ್ಯ ಮತ್ತು ಹಾಡುಗಳ ಕಾರ್ಯಕ್ರಮಗಳು ಜರುಗಿದವು. ವೀರಗಾಸೆ, ಕಂಸಾಳೆ, ಕೋಲಾಟ, ಹುಲಿಕುಣಿತ, ಕೊಡವನಾಡಿನ ಸತ್ಯ, ಸುಗ್ಗಿ ಕುಣಿತ ಹಾಗೂ ಇನ್ನಿತರ ನೃತ್ಯಗಳು ಕಣ್ಮನ ತಣಿಯುವಂತಿದ್ದವು. ಕಾರ್ಯಕ್ರಮದಲ್ಲಿ ಗಂಗಾ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರು, ಪ್ರಾಂಶುಪಾಲರು, ಬೋಧಕ ವರ್ಗ, ಬೋಧಕೇತರ ವರ್ಗ ಹಾಗೂ ಗಂಗಾ ಸೆಂಟ್ರಲ್ ಶಾಲೆ, ಗಂಗಾ ಪದವಿ ಪೂರ್ವ ಕಾಲೇಜು ಹಾಗೂ ಗಂಗಾ ಪದವಿ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು..

