ಹಿರಿಯೂರು ತಾಲೂಕಿನ ಅದಿವಲ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಶಂಕುಸ್ಥಾಪನೆ ಚಾಲನೆ…!!!

Listen to this article

ಚಿತ್ರದುರ್ಗ: ಹಿರಿಯೂರು ತಾಲೂಕಿನ ಆದಿವಾಲ ಗ್ರಾಮದ ಬಳಿ, ನೂತನವಾಗಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ, ಶಿಷ್ಟಾಚಾರ ಉಲ್ಲಂಘನೆಯಾದ ಘಟನೆ ನಡೆಯಿತು. ಸರ್ಕಾರಿ ಸಮಾರಂಭದಲ್ಲಿ, ಶಾಸಕಿ ಪೂರ್ಣಿಮಾ ಅವರ ಪತಿ ರಾಜ್ಯ ಯಾದವ ಸಂಘದ ಅಧ್ಯಕ್ಷ ಡಿ.ಟಿ. ಶ್ರೀನಿವಾಸ್, ಸಮಾರಂಭದ ಗುದ್ದಲಿ ಪೂಜೆ, ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಲ್ಲದೆ,ಪ್ರಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ, ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಕೇಂದ್ರ ಸಚಿವ ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹಾಗೂ ಸಾರ್ವಜನಿಕರಿಗೆ ಅಚ್ಚರಿ ಮೂಡಿಸಿದರು.ಸರ್ಕಾರಿ ಕಾರ್ಯಕ್ರಮಗಳಲ್ಲಿ ಖಾಸಗಿ ವ್ಯಕ್ತಿಗಳು ಭಾಗವಹಿಸಬಾರದು ಎಂಬ ನಿಯಮವಿದ್ದರೂ, ಇದ್ಯಾವುದನ್ನೂ ಲೆಕ್ಕಿಸದೆ ಶಿಷ್ಟಾಚಾರ ಉಲ್ಲಂಘನೆ ಮಾಡಿದರು. ಸಮಾರಂಭದ ವೇದಿಕೆಯಲ್ಲಿದ್ದ ಬ್ಯಾನರ್ ನಲ್ಲೂ ಸಹ, ಇದಿರು ಸರ್ಕಾರಿ ಕಾರ್ಯಕ್ರಮವೂ? ಅಥವಾ ಶಾಸಕಿ ಪೂರ್ಣಿಮಾ ಹಾಗೂ ಡಿ.ಟಿ ಶ್ರೀನಿವಾಸ್ ಅವರ ಸ್ವಂತ ಕಾರ್ಯಕ್ರಮವು ಎಂಬಂತೆ ಬ್ಯಾನರ್ ನಲ್ಲಿ ಶ್ರೀನಿವಾಸ್ ಫೋಟೋ ರಾರಾಜಿಸುತ್ತಿತ್ತು. ಇತ್ತೀಚೆಗೆ, ಭೀಮಸಮುದ್ರ ಗ್ರಾಮದಲ್ಲಿ ನಡೆದ ಅಂಬೇಡ್ಕರ್ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ, ಸಂಸದ, ಕೇಂದ್ರ ಸಚಿವ ನಾರಾಯಣಸ್ವಾಮಿ ಅವರ ಹೆಸರನ್ನು, ನಾಲ್ಕನೇ ಸ್ಥಾನದಲ್ಲಿ ಮುದ್ರಿಸಿ, ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದ ಜಿಲ್ಲಾಡಳಿತ, ಸಂಬಂಧಪಟ್ಟ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ. ಇನ್ನು ಈ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅವಗಡಕ್ಕೆ ಜಿಲ್ಲಾಡಳಿತ ಸಾಕ್ಷಿಯಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಪತ್ರಿಕಾ ಹೇಳಿಕೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ, ವೇದಿಕೆ ಮೇಲೆ ಕಟ್ಟಿದ್ದ ಬೃಹತ್ ಬ್ಯಾನರ್ ನಲ್ಲಿ, ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಅವರ ಭಾವಚಿತ್ರವಿದ್ದ ಕಾರಣ,ತೆಗೆಯಲು ಮನವಿ ಮಾಡಿದರೂ ಸಹ, ನಮ್ಮ ಮಾತು ಕೇಳಿಸಿಕೊಳ್ಳಲಿಲ್ಲ. ಇದು ಶಿಷ್ಟಾಚಾರ ಉಲ್ಲಂಘನೆ, ಈ ವಿಚಾರದಲ್ಲಿ ನಾವು ಅಸಹಾಯಕರಾಗಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ಹಿಂದೆಯೂ, ಶಾಸಕಿ ಪೂರ್ಣಿಮಾ ಅವರ ಪತಿ ಡಿ ಟಿ ಶ್ರೀನಿವಾಸ್, ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಅಭಿವೃದ್ಧಿ ಕೆಲಸಗಳ ಬಗ್ಗೆ ಚರ್ಚಿಸಿ, ಶಿಷ್ಟಾಚಾರ ಉಲ್ಲಂಘನೆ ಮಾಡಿರುವುದು ನಡೆದಿದೆ. ವಿವಿ ಸಾಗರ ಜಲಾಶಯದಿಂದ ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲೂಕಿಗೆ ನೀರು ಬಿಡುವ ಸಂದರ್ಭದಲ್ಲಿ, ಡಿ.ಟಿ. ಶ್ರೀನಿವಾಸ್ ಪತ್ನಿ ಶಾಸಕಿ ಪೂರ್ಣಿಮಾ ಅವರ ಜೊತೆ ಜಲಾಶಯಕ್ಕೆ ಹೋಗಿ, ನೀರು ಬಿಡುಗಡೆ ಮಾಡುವ ಕ್ರಸ್ಟ್ ಗೇಟ್ ಬಂದ್ ಮಾಡುವ ಮೂಲಕ, ಪ್ರಜ್ಞಾವಂತ ನಾಗರಿಕರ ಆಕ್ರೋಶಕ್ಕೆ ಗುರಿಯಾಗಿದ್ದರು. ಶಾಸಕಿ ಪೂರ್ಣಿಮಾ ಅವರ ಪತಿ ಎನ್ನುವ ಕಾರಣಕ್ಕೆ, ಇಲ್ಲಿನ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳಲಾಗದೆ ಅಸಹಾಯಕರಾಗಿದ್ದಾರೆ…

ವರದಿ. ಶಶಿಕುಮಾರ್. ಜೆ.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend