ಹೂವಿನಹಡಗಲಿ: ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ…!!!

Listen to this article

ಹೂವಿನಹಡಗಲಿ: ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ..
ವಿಜಯನಗರ(ಹೊಸಪೇಟೆ), ಹೂವಿನಹಡಗಲಿ ತೋಟಗಾರಿಕೆ ಇಲಾಖೆಯಿಂದ 2022-23ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಮಲ್ಲಿಗೆ ಹೂವು ಹಾಗೂ ಇತರೆ ಹೂವುಗಳ ಮತ್ತು ಹಣ್ಣು ಬೆಳೆಗಳ ಪ್ರದೇಶ ವಿಸ್ತರಣೆ, ಈರುಳ್ಳಿ ಶೇಖರಣಾ ಘಟಕ, ಕೊಳವೆ ಬಾವಿ ಮರು ಪೂರ್ಣ ಘಟಕ, ವೈಯಕ್ತಿಕ ಫಲಾನುಭವಿಗಳಿಗೆ ಮನೆಯ ಹಿಂಭಾಗದಲ್ಲಿ ಪೌಷ್ಠಿಕ ತೋಟ ನಿರ್ಮಾಣ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಹೂವು ಮತ್ತು ಹಣ್ಣು ಬೆಳೆಗಳ ಪ್ರದೇಶ ವಿಸ್ತರಣೆ, ಈರುಳ್ಳಿ ಶೇಖರಣಾ ಘಟಕ, ಯಾಂತ್ರೀಕರಣ, ಹೂ, ಹಣ್ಣು ಮತ್ತು ತರಕಾರಿ ಮಾರಾಟ ಮಾಡುವ ತಳ್ಳುವಗಾಡಿ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತದೆ.
ರಾಷ್ಟ್ರೀಯ ಎಣ್ಣೆ ತಾಳೆ ಬೇಸಾಯ ಯೋಜನೆಯಡಿ ತಾಳೆ ಬೆಳೆ ಬೆಳೆಯಲು ಇಚ್ಚಿಸಿರುವ ರೈತರಿಗೆ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಸಹಾಯಧನ ನೀಡಲಾಗುತ್ತಿದ್ದು, ಅರ್ಹ ರೈತರಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗೆ ಮಾರ್ಗಸೂಚಿ ಅನುಸಾರ ಹನಿ ನೀರಾವರಿ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಖಾಯಂ ನೀರಾವರಿ ಸೌಲಭ್ಯವಿರುವ ಹಾಗೂ ತೋಟಗಾರಿಕೆ ಬೆಳೆ ಹೊಂದಿರುವ ಮತ್ತು ಬೆಳೆಯಲು ಆಸಕ್ತಿ ಹೊಂದಿರುವ ರೈತರು ಮೇ31ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹೂವಿನಹಡಗಲಿ ತೋಟಗಾರಿಕೆ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಹಾಗೂ ಹೂವಿನಹಡಗಲಿಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ ಮತ್ತು ದೂ.08399240136ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ…

ವರದಿ. ಅಜಯ್, ಚ, ಹೂವಿನಹಡಗಲಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend