ಚಿಕ್ಕಜಾಜೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವಾಸ್ ತರಬೇತಿ ಕಾರ್ಯಕ್ರಮ…!!!

Listen to this article

ಚಿಕ್ಕಜಾಜೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಇಲಾಖೆ ವತಿಯಿಂದ ವಿಶ್ವಾಸ್ ತರಬೇತಿ ಹಮ್ಮಿಕೊಳ್ಳಲಾಗಿತ್ತು.

ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹೊಳಲ್ಕೆರೆ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಚಿಕ್ಕಜಾಜೂರು ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ವತಿಯಿಂದ ಗ್ರಾಮೀಣ ಆರೋಗ್ಯ ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿ ಸದಸ್ಯರುಗಳಿಗೆ ಹಾಗೂ ಸಮುದಾಯ ಪ್ರತಿನಿಧಿಗಳಿಗೆ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ, ಆರೋಗ್ಯ, ಪೌಷ್ಟಿಕತೆ, ನೀರು ಮತ್ತು ನೈರ್ಮಲ್ಯ ಹಾಗೂ ಶುಚಿತ್ಬದ ಬಗ್ಗೆ ವಿಶ್ವಾಸ್ ತರಬೇತಿ ಕಾರ್ಯಾಗಾರ ಹಮ್ಮಿಕೊಂಡಿದ್ದು ಚಿಕ್ಕಜಾಜೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಪ್ರದೀಪ್ ಕುಮಾರ್ ಅವರು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ತರಬೇತಿ ನೀಡಿದ್ದು ಕಂಡು ಬಂದಿದೆ.

ಇನ್ನೂ ಈ ಕಾರ್ಯಕ್ರಮದಲ್ಲಿ ಚಿಕ್ಕಜಾಜೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಅಂಜಲಿ ಮೋಹನ್, ಉಪಾಧ್ಯಕ್ಷರಾದ ದೇವಮ್ಮ, ಸದಸ್ಯರುಗಳಾದ ರೂಪ ಮನೋಜ್, ಮೌನೇಶ್ವರ್, ತಿಪ್ಪಮ್ಮ, ಪವಿತ್ರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಶೇಖರ್ ನಾಯ್ಕ್, ಆಶಾ ಮೇಲ್ವಿಚಾರಕಾರದ ಉಷಾ, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆರೋಗ್ಯ ನಿರೀಕ್ಷಣಾಧಿಕಾರಿ ವೆಂಕಟೇಶಪ್ಪ, ಹಾಲೇಶ್, ಅರುಣ್, ವೆಂಕಟೇಶ್, ಸುಜಾತ ಹಾಗೂ ಸಮುಧಾಯ ಆರೋಗ್ಯ ಶಿಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಕೇಂದ್ರದ ಸುರಕ್ಷತಾಧಿಕಾರಿ ಹಾಗೂ ಆಶಾ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು….

ವರದಿ. ಸುರೇಶ್ ಹೊಳಲ್ಕೆರೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend