ವಿಜಯನಗರ (ಹೊಸಪೇಟೆ )ತಾಯಿ, ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ: ಪರಿಶೀಲನೆ…!!!

Listen to this article

ತಾಯಿ, ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳು ದಿಢೀರ್ ಭೇಟಿ: ಪರಿಶೀಲನೆ

ಹೊಸಪೇಟೆ (ವಿಜಯನಗರ) :ಹೊಸಪೇಟೆಯ ನಗರಸಭೆಯ ಹಿಂಭಾಗದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಮಾರ್ಚ 15ರಂದು ದಿಢೀರ್ ಭೇಟಿ ನೀಡಿದರು.


ಮೊದಲಿಗೆ ಆಸ್ಪತ್ರೆಯ ಸುತ್ತಲಿನ ಹೊರಾಂಗಣದಲ್ಲಿ ಸಂಚರಿಸಿ ಸಿಸಿ ರಸ್ತೆ ಕಾಮಗಾರಿಯ ಬಗ್ಗೆ ಪರಿಶೀಲಿಸಿದರು. ಬಳಿಕ ಆಸ್ಪತ್ರೆ ಪ್ರವೇಶಿಸಿ ಅಲ್ಲಿನ ನಾನಾ ವಾರ್ಡಗಳಿಗೆ ಭೇಟಿ ನೀಡಿ ಮಾಹಿತಿ ಪಡೆದರು. ಆಸ್ಪತ್ರೆಯಲ್ಲಿದ್ದ ರೋಗಿಗಳೊಂದಿಗೆ ಜಿಲ್ಲಾಧಿಕಾರಿಗಳು ಸಮಾಲೋಚನೆ ನಡೆಸಿ ಆಸ್ಪತ್ರೆಯಲ್ಲಿನ ಸೇವೆಗಳ ವಿನಿಮಯದ ಬಗ್ಗೆ ಪರೀಕ್ಷಿಸಿದರು.


ಇದೆ ವೇಳೆ ಜಿಲ್ಲಾಧಿಕಾರಿಗಳು, ಮಕ್ಕಳ ರೋಗ ತಜ್ಞರು ಮತ್ತು ಸ್ತ್ರೀರೋಗ ತಜ್ಞರೊಂದಿಗೆ ಸಮಾಲೋಚಿಸಿದರು. ಭದ್ರತಾ ಸೇವೆ ಸೇರಿದಂತೆ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿಯನ್ನು ಪಡೆದುಕೊಳ್ಳುವ ಪ್ರಕ್ರಿಯೆ ನಡೆಸುವುದಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ ಅನುಮೋದನೆ ಪಡೆದುಕೊಳ್ಳಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.


ಈ ಆಸ್ಪತ್ರೆಯನ್ನು 60 ಬೆಡ್‌ನಿಂದ 100 ಬೆಡ್‌ಗಳವರೆಗೆ ವಿಸ್ತರಣೆ ಮಾಡಲು ಬೇಕಾದ ಎಲ್ಲಾ ಮೂಲಭೂತ ಸೌಕರ್ಯಗಳು ಇಲ್ಲಿದ್ದು ಆಸ್ಪತ್ರೆಯನ್ನು ಮೇಲ್ದರ್ಜೇಗೇರಿಸಲು ಅನುಕೂಲವಾಗುವ ಹಾಗೆ ಪ್ರತಿ ತಿಂಗಳು 500 ಮೇಲ್ಪಟ್ಟು ಹೆರಿಗೆ ಮಾಡಲು ಕ್ರಮ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಆಸ್ಪತ್ರೆಯಲ್ಲಿನ ಸ್ತ್ರೀರೋಗ ತಜ್ಞರಿಗೆ ಆದೇಶ ಮಾಡಿದರು.
ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯಗಳಿವೆ. ಆದರೆ, ಅಗತ್ಯಕ್ಕೆ ತಕ್ಕಂತೆ ಸಿಬ್ಬಂದಿ ನೌಕರರ ಕೊರತೆಯಾಗಿದೆ. ಕೆಲವು ವಿಭಾಗಗಳಿಗೆ ಉಪಕರಣಗಳ ಕೊರತೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಶಂಕರ ನಾಯಕ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.


ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಆಸ್ಪತ್ರೆಯಲ್ಲಿನ ಮೂಲಭೂತ ಸೌಕರ್ಯ ಸದ್ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಆಸ್ಪತ್ರೆಗೆ ಅವಶ್ಯವಿರುವ ಸಿಬ್ಬಂದಿ ನೌಕಕರನ್ನು ಹೊರಗುತ್ತಿಗೆ ಆಧಾರದ ಮೇಲೆ ಪಡೆದು ಜನರಿಗೆ ಉತ್ತಮ ಸೇವೆ ನೀಡಲು ಕ್ರಮ ವಹಿಸಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಿದರು.
ಮಕ್ಕಳ ರೋಗ ತಜ್ಞರೊಂದಿಗೆ ಜಿಲ್ಲಾಧಿಕಾರಿಗಳು ಇದೆ ವೇಳೆ ಸಮಾಲೋಚಿಸಿದರು. ಮಕ್ಕಳ ವಿಭಾಗಕ್ಕೆ ಅವಶ್ಯಕತೆ ಇದ್ದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಸಹ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಮಕ್ಕಳ ರೋಗ ತಜ್ಞರಿಗೆ ಸೂಚಿಸಿದರು.
ಆಸ್ಪತ್ರೆ ಸುತ್ತಲಿನ ಸಿಸಿ ರಸ್ತೆಯ ಗುಣಮಟ್ಟದ ಬಗ್ಗೆ ಸಹ ಪರಿಶೀಲಿಸಿ ವರದಿ ಮಾಡಬೇಕು ಎಂದು ಇದೆ ವೇಳೆ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗೆ ಸೂಚನೆ ನೀಡಿದರು. ಈ ವೇಳೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಲೀಂ., ಅರವಳಿಕೆ ತಜ್ಞರಾದ ನೂರಭಾಷಾ ಸೇರಿದಂತೆ ಇತರರು ಇದ್ದರು…

ವರದಿ. ಗಣೇಶ್. ಬಿ. ಹೊಸಪೇಟೆ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend