ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎಸ್ ಈರಣ್ಣ ಆಯ್ಕೆ..!!

ವರದಿ. ಮಂಜುನಾಥ್, ಎಚ್

ಚಿತ್ರದುರ್ಗ: ಮೊಳಕಾಲ್ಮುರು: * ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಎಸ್ ಈರಣ್ಣ ಆಯ್ಕೆ* ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಶಿಕ್ಷಕ ಎಸ್, ಈರಣ್ಣ ಆಯ್ಕೆಯಾಗಿದ್ದಾರೆ. ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿದ್ದ ಆರೋಗ್ಯ ಇಲಾಖೆಯ ಡಿ. ಚಿದಾನಂದಪ್ಪ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಶನಿವಾರ ಚುನಾವಣೆ ನಿಗದಿ ಪಡಿಸಲಾಗಿತ್ತು. ಈ ಚುನಾವಣೆಯಲ್ಲಿ 30 ಮತದಾರರಿದ್ದು, ಶಿಕ್ಷಕರಾದ ಎಸ್. ಈರಣ್ಣ ಎಸ್. ಕರಿಬಸಪ್ಪ ಹಾಗೂ ಎಸ್.ಬಿ. ರಾಮಚಂದ್ರಯ್ಯ ಕಣದಲ್ಲಿದ್ದರು. ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆವರೆಗೆ ಮತದಾನ ಪ್ರಕ್ರಿಯೆ ನಡೆಯಿತು. ಮತದಾನ ಪೂರ್ಣಗೊಂಡ ನಂತರ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸಲಾಯಿತು. ಎಸ್. ಈರಣ್ಣ 14 ಮತಗಳನ್ನು ಪಡೆದು ಗೆಲುವಿನ ನಗೆ ಬೀರಿದರು. ಪ್ರತಿಸ್ಪರ್ಧಿಗಳಾದ ಎಸ್. ಕರಿಬಸಪ್ಪ 11 ಹಾಗೂ ಎಸ್.ಬಿ. ರಾಮಚಂದ್ರಯ್ಯ 5 ಮತಗಳನ್ನು ಪಡೆದು ಪರಾಜಿತಗೊಂಡರು. ಚುನಾವಣಾಧಿಕಾರಿಯಾಗಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಜಿ.ಆರ್. ಪ್ರದೀಪ್ ಕುಮಾರ್ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಟಿ.ತಿಮ್ಮಾರೆಡ್ಡಿ ಜಿಲ್ಲಾಧ್ಯಕ್ಷ ಕೆ. ಮಂಜುನಾಥ, ವರ್ಗಾವಣೆಗೊಂಡ ತಾಲೂಕು ಅಧ್ಯಕ್ಷ ಚಿದಾನಂದಪ್ಪ ಹಿರಿಯರು ತಾಲೂಕು ಸಂಘದ ಅಧ್ಯಕ್ಷ ಎಸ್. ಶಿವಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ತಿಪ್ಪೇಸ್ವಾಮಿ, ತಾಲೂಕು ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ತಿಮ್ಮೇಶಪ್ಪ ಕ್ರೀಡಾ ಕಾರ್ಯದರ್ಶಿ ಪ್ರಸನ್ನ ಕೇಶವಮೂರ್ತಿ ಮತ್ತಿತರರು ಇದ್ದರು.

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *