ಗವಿ ಸಿದ್ದೇಶ್ವರ ಜಾತ್ರೆಪ್ರಯುಕ್ತ ಏನಿರುತ್ತೆ, ಏನಿರಲ್ಲ ಇಲ್ಲಿದೆ ಮಾಹಿತಿ ನೀವೇ ನೋಡಿ…!!!

Listen to this article
ವರದಿ. ಮಂಜುನಾಥ್ ದೊಡ್ಡಮನಿ ಹೊಸಪೇಟೆ

1️⃣ ಪ್ರತಿ ವರ್ಷ ಜಾತ್ರೆಯ ಅಂಗವಾಗಿ ಸಾಮಾಜಿಕ ಕಳಕಳಿಯಡಿ ನಡೆಯುವ ವಿದ್ಯಾರ್ಥಿ ಜಾಥಾ ಇರುವದಿಲ್ಲ

2️⃣ ಗುಡ್ಡದಲ್ಲಿ ಹಾಗೂ ಕೆರೆಯ ದಡದಲ್ಲಿ ಬಹಳ ಜನ ಒಂದೆ ಕಡೆ ಸೇರುವುದರಿಂದ ತೆಪ್ಪೋತ್ಸವ ಕಾರ್ಯಕ್ರಮವೂ ಸಹ ಇರುವುದಿಲ್ಲ.

3️⃣ ದಿನಾಂಕ 30 ಶನಿವಾರ ಜರುಗುವ ಮಹಾರಥೋತ್ಸವ ಪ್ರತಿ ವರ್ಷದಂತೆ ಲಕ್ಷಾಂತರ ಭಕ್ತ ಜನರ ಮಧ್ಯದಲ್ಲಿ ಜರುಗುವದಿಲ್ಲ. *ಜಾತ್ರಾ ಮೈದಾನದಲ್ಲಿ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ, ಪುರಿ ಜಗನ್ನಾಥ ರಥೋತ್ಸವ, ಮೈಸೂರ ದಸರಾ ಜಂಬೂಸವಾರಿ ರೀತಿಯಲ್ಲಿ ಕೇವಲ ಸಾಂಪ್ರದಾಯಿಕವಾಗಿ ರಥೋತ್ಸವವನ್ನು ಸರಳವಾಗಿ ಆಚರಿಸಲಾಗುವುದು.*

4️⃣ ಕೈಲಾಸ ಮಂಟಪದ ವೇದಿಕೆಯಲ್ಲಿ ಜರುಗುವ ಧಾರ್ಮಿಕ ಗೋಷ್ಠಿ, ಭಕ್ತ ಹಿತ ಚಿಂತನಾ ಸಭೆ, ಅನುಭಾವಿಗಳ ಅಮೃತಗೋಷ್ಠಿ, ಸಂಗೀತ, ಸಾಹಿತ್ಯ, ಹಾಸ್ಯ, ಸಾಧಕರ ಸನ್ಮಾನ ಈ ಯಾವ ಕಾರ್ಯಕ್ರಮಗಳೂ ನಡೆಯುವದಿಲ್ಲ.

5️⃣ ದಿನಾಂಕ 31 ರವಿವಾರದಂದು *ಶರಣರ ದೀರ್ಘದಂಡ ನಮಸ್ಕಾರ ಇರುತ್ತದೆ*. ಆದರೆ *ಭಕ್ತರಿಗೆ ದೀರ್ಘದಂಡ ನಮಸ್ಕಾರ ಹಾಕಲು ಅನುಮತಿ ಇರುವುದಿಲ್ಲ. ಅವರ ಹಿಂದೆ ದೀರ್ಘದಂಡ ನಮಸ್ಕಾರ ಹಾಕದಂತೆ ಭಕ್ತರಲ್ಲಿ ಕೇಳಿಕೊಳ್ಳುತ್ತೇವೆ.* ಶರಣರು ಧೀರ್ಘದಂಡ ನಮಸ್ಕಾರ ಹಾಕುವ ದಿನ ಹೊರತು ಪಡಿಸಿ ತಮಗೆ ಅನುಕೂಲವಾದ ಸಮಯ ಅಥವಾ ದಿನದಂದು ತಮ್ಮ ಹರಕೆ ಅಥವಾ ಸಂಕಲ್ಪಗಳನ್ನು ಪೂರೈಸಿಸಬಹುದು.

6️⃣ ದಿನಾಂಕ 31 ರಂದು ಸಿದ್ಧೇಶ್ವರ ಮೂರ್ತಿಯ ಮೆರವಣಿಗೆ ನಂತರ ನಡೆಯುವ ಮದ್ದು ಸುಡುವ ಕಾರ್ಯಕ್ರಮ ನಡೆಯುವದಿಲ್ಲ.

7️⃣ ಪ್ರತಿ ವರ್ಷದಂತೆ 15-20 ದಿವಸ ನಡೆಯುವ ಮಹಾದಾಸೋಹ ಶ್ರೀಮಠಕ್ಕೆ ಬರುವ ಭಕ್ತಾಧಿಗಳಿಗೆ ಅನಾನುಕೂಲವಾಗದಿರಲೆಂದು ಈ ವರ್ಷ ಕೇವಲ ಜನೇವರಿ 30,31 ಮತ್ತು ಫೆಬ್ರುವರಿ 1ರವರೆಗೆ ಸೀಮಿತಗೊಳಿಸಲಾಗಿದೆ.
*ಭಕ್ತರು ಯಾರು ರೊಟ್ಟಿಗಳನ್ನು ಹಾಗೂ ಸಿಹಿ ಪದಾರ್ಥಗಳನ್ನು ತರಬಾರದು, ಅವುಗಳನ್ನು ಮಹಾದಾಸೋಹದಲ್ಲಿ ಸ್ವೀಕರಿಸುವದಿಲ್ಲ.*

8️⃣ ದಾಸೋಹದಲ್ಲಿ ಕೇವಲ ದವಸ-ದಾನ್ಯ, ಕಾಯಿಪಲ್ಲೆಯನ್ನು ಮಾತ್ರ ಸ್ವೀಕರಿಲಾಗುವುದು.

9️⃣ ಜಾತ್ರಾ ಮಹೋತ್ಸವದಲ್ಲಿ ಅಂಗಡಿಗಳನ್ನು, ಅಮ್ಯುಜ್‍ಮೆಂಟ್ ಪಾರ್ಕ, ಮಿಠಾಯಿ, ಹೋಟಲ್, ಸ್ಟೇಷನರಿ ಅಂಗಡಿಗಳನ್ನಗೊಂಡಂತೆ ಸಂಪೂರ್ಣವಾಗಿ ಆವರಣದಲ್ಲಿ ಜಾತ್ರಾ ಅಂಗಡಿಗಳು ಇರುವದಿಲ್ಲ.

🔟 ಜಾತ್ರಾ ಮಹೋತ್ಸವದ ಅಂಗವಾಗಿ ಶ್ರೀಮಠದ ಆವರಣದಲ್ಲಿ ಪಾನಿಪುರಿ, ಗೋಬಿ, ಕಡ್ಲೆ, ಕಬ್ಬಿನಹಾಲು ಐಸ್‍ಕ್ರೀಮ್, ಇತರೆ ತಿನಿಸಿನ ಮಾರಾಟದ ಅಂಗಡಿಗಳನ್ನು ನಿಷೇಧಿಸಿದೆ.

1️⃣1️⃣ ಕೃಷಿ ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಕ್ರೀಡಾಕೂಟ, ನಾಟಕ, ವಿವಿಧ ಸಾಂಸ್ಕøತಿಕ, ಮತ್ತು ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಿದೆ.

1️⃣2️⃣ ಪ್ರತಿ ವರ್ಷದಂತೆ ಶ್ರೀ ಗವಿಸಿದ್ಧೇಶ್ವರ ಆಯುರ್ವೇದಿಕ್ ಆಸ್ಪತ್ರೆಯಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ಜರುಗುವ ರಕ್ತದಾನ ಶಿಬಿರವನ್ನು ನಡೆಸಲಾಗುತ್ತದೆ.

1️⃣3️⃣ ಪ್ರತಿ ವರ್ಷ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುತಿತ್ತು ಆದರೆ ಈ ವರ್ಷ  ರಥೋತ್ಸವಕ್ಕೆ ಬರುವ ಭಕ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗುವದಿಲ್ಲ.

1️⃣4️⃣ ಶ್ರೀ ಗವಿಸಿದ್ಧೇಶ್ವರ ಗದ್ದುಗೆ ದರ್ಶನಕ್ಕೆ ಅವಕಾಶವಿದೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಭಕ್ತರು ದರ್ಶನ ಪಡೆಯಬಹುದು. ಆದರೆ ಎಲ್ಲಿ ಗುಂಪುಗೂಡಿ ಕೂಡುವಂತಿಲ್ಲ.

* ಮ

ವಿ ಸೂ: –
* _ಶ್ರೀ ಗವಿಸಿದ್ಧೇಶ್ವರ ಮಹಾ ರಥೋತ್ಸವದ ದೃಶ್ಯವನ್ನು ಸಾಮಾಜಿಕ, ಜಾಲತಾಣದಲ್ಲಿ ಹಾಗೂ ಸ್ಥಳೀಯ ಚಾನಲ್ಗಳಲ್ಲಿ ಪ್ರಸಾರ ಮಾಡಲಾಗುವದು. ಒಂದು ವೇಳೆ ಈ ರೀತಿಯಾಗಿರಬಹುದು, ಆದರೆ ಅವುಗಳು ಇರಬಾರದು.

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend