ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ತಪ್ಪದೇ ಮತ ಚಲಾಯಿಸಿ…!!!

Listen to this article

ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ತಪ್ಪದೇ ಮತ ಚಲಾಯಿಸಿ

ಬಳ್ಳಾರಿ:ಲೋಕಸಭಾ ಚುನಾವಣೆಗೆ ಮೇ 07 ರಂದು ಮತದಾನ ನಡೆಯಲಿದ್ದು, ಸುಭದ್ರ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ತಪ್ಪದೇ ಎಲ್ಲಾರೂ ಮತದಾನ ಮಾಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ ರಮೇಶ್ ಬಾಬು ತಿಳಿಸಿದರು.
ಜಿಲ್ಲಾ ಆಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಮಹಾನಗರ ಪಾಲಿಕೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ದೇವಿನಗರ ಮತ್ತು ಪಾರ್ವತಿನಗರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿದರು.
ಸಧೃಢ ದೇಶದ ನಿರ್ಮಾಣಕ್ಕೆ ಜವಾಬ್ದಾರಿಯುತ ನಾಗರಿಕರಾಗಿ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದ್ದು ಮತದಾನದಲ್ಲಿ ಭಾಗವಹಿಸಿ ಪ್ರಜಾಪ್ರಭುತ್ವ ಸದೃಢತೆಗೆ ತಪ್ಪದೇ ಮತದಾನದ ಹಕ್ಕನ್ನು ಚಲಾಯಿಸಬೇಕು. ಇದರಿಂದ ನಾಗರಿಕರಾಗಿ ಸ್ವಾಸ್ಥ್ಯ ಸಮಾಜಕ್ಕಾಗಿ ಪ್ರಶ್ನಿಸಲು ಸಾಧ್ಯವಾಗುತ್ತದೆ ಎಂದರು.
ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ ಮಾತನಾಡಿ, ಶೇಕಡವಾರು ಮತದಾನ ಹೆಚ್ಚಿಸಲು ಹಾಗೂ ಸಾರ್ವಜನಿಕರಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ನೀಡಲು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದ್ದು, ದೇಶದ ಹಿತ ರಕ್ಷಣೆಗೆ ಮತದಾನ ಒಂದು ಮೂಲಭೂತ ಹಕ್ಕು ಎಂಬುದನ್ನು ಪರಿಣಾಕಾರಿಯಾಗಿ ಸಾರಲು ಪ್ರತಿಯೊಬ್ಬರು ಮತದಾನ ಮಾಡಬೇಕು ಎಂದು ಹೇಳಿದರು.


ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಶೇ.100 ರಷ್ಟು ಗುರಿಮುಟ್ಟಿದ ಬೂತ್‍ಗಳಾಗಿ ಪರಿವರ್ತನೆಯಾಗಲು ತಾವೆಲ್ಲರೂ ಕೈ ಜೋಡಿಸಬೇಕು ಎಂದು ವಿನಂತಿಸಿದರು.
ಇದೇ ಸಂದರ್ಭದಲ್ಲಿ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುವ ಮತ್ತು ಯಾವುದೇ ಪ್ರೇರೇಪಣೆಗಳ ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೇ ಮತ ಚಲಾಯಿಸುವ ಕುರಿತು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ ಪ್ರತಿಜ್ಞೆ ಭೋಧಿಸಿದರು.
ಜಾಗೃತಿ ಜಾಥಾವು ಹವಂಭಾವಿ ಕಾಲುವೆಯ ಬಲಭಾಗದ ಸುತ್ತಲಿನ ಪ್ರದೇಶ ಹಾಗೂ ಪಾರ್ವತಿನಗರ, ತಾಳೂರು ರಸ್ತೆ ಜಿಮ್‍ಖಾನ್ ರಸ್ತೆ ಸುತ್ತಲಿನ ಪ್ರದೇಶದಲ್ಲಿ ಸಂಚರಿಸಿ ಜಾಗೃತಿ ನೀಡಲಾಯಿತು.
ಈ ಸಂದರ್ಭದಲ್ಲಿ ದೇವಿನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಧಾರಾಣಿ, ಡಾ.ಪ್ರಮೋದ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಾಂತಮ್ಮ, ಹವಂಭಾವಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಗುರುಗಳಾದ ಸಿ.ನಿಂಗಪ್ಪ, ಶಿಕ್ಷಕಿಯರಾದ ಅನಿತ.ಜಿ., ಬಿ.ಶೀಲ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಜಲಜಾಕ್ಷಿ, ಗೌರಮ್ಮ, ಲೂದಿಯ, ಅಮರೇಶ್, ಕೇಶವ್, ರಾಮಕೃಷ್ಣ, ರಶ್ಮಿ, ಸುಪ್ರಿತ, ಶ್ವೇತ, ಪ್ರಶಾಂತ್, ಆದಿಲಕ್ಷ್ಮಿ ಹಾಗೂ ಆಶಾಕಾರ್ಯಕರ್ತೆಯರು ಪಾಲಿಕೆಯ ಸಿಬ್ಬಂದಿಯವರಾದ ರಮೇಶ್ ಸೇರಿದಂತೆ ಇತರರು ಬಾಗವಹಿಸಿದ್ದರು…

ವರದಿ. ವಿರೇಶ್, ಎಚ್, ಬಳ್ಳಾರಿ

Listen to this article

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend